ದಿಲ್ಲಿ: ಇಂದು ನಡೆದ ಸಂಸತ್ತಿನ ಲೋಕಸಭೆ ಕಲಾಪದಲ್ಲಿ ತ್ರಿವಳಿ ತಲಾಖ್ ಮಸೂದೆಯನ್ನು ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್ ಗುರುವಾರ ಮಂಡಿಸಿದ್ದಾರೆ.
ಬಳಿಕ ಮಾತನಾಡಿದ ಅವರು, ಮುಸ್ಲಿಂ ಮಹಿಳೆಯರ ಸಮಾನ ಹಕ್ಕು ಮತ್ತು ನ್ಯಾಯಕ್ಕಾಗಿ ಕಾನೂನು ಜಾರಿಗೊಳಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಈ ಕಾನೂನು ಸಂಪ್ರದಾಯ ಮತ್ತು ಧರ್ಮಕ್ಕೆ ಸಂಬಂಧಿಸಿದ ಚಟುವಟಿಕೆಗಳಿಗೆ ಕಾನೂನು ಸಂಬಂಧಿಸಿಲ್ಲ ಎಂದು ಸ್ಪಷ್ಟಪಡಿಸಿದರು
ಸಚಿವರು ವಿಧೇಯಕ ಮಂಡಿಸುತ್ತಿದ್ದಂತೆ ಅಸಾದುದ್ದೀನ್ ಓವೈಸಿ, ಕಾಂಗ್ರೆಸ್, ಟಿಎಂಸಿ, ಆರ್ ಜೆಡಿ ಸೇರಿದಂತೆ ವಿಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸಿತು.
ಈ ಮಾತನಾಡಿದ ಎಐಎಂಐಎಂ ವರಿಷ್ಠ, ಸಂಸದ ಅಸಾದುದ್ದೀದನ್ ಒವೈಸಿ, ವಿಧೇಯಕ ಮುಸಲ್ಮಾನ ಮಹಿಳೆಯರ ಅಧಿಕಾರಕ್ಕೆ ಧಕ್ಕೆ ಬಂದಿದೆ. ಇದು ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗಿದೆ ಎಂದು ಅಸಮಾಧಾನ ಹೊರಹಾಕಿದರು.

