1 (1)

ಬಂಟ್ವಾಳ: ದ.ಕ.ಜಿಲ್ಲೆಯಲ್ಲಿ ಮಾತ್ರ ಪೂರ್ಣ ಯೋಜನೆ ಸ್ವಲ್ಪ ಮಟ್ಟಿಗೆ ಹಿನ್ನಡೆ ಕಂಡಿದ್ದು, ಮುಂದಿನ ದಿನಗಳಲ್ಲಿ ಯಶಸ್ವಿಗೊಳಿಸಲು ಸಂಬಂಧಪಟ್ಟ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ನಿರ್ದೇಶನ ನೀಡಿದ್ದಾರೆ.

ಗುರುವಾರ ಇಲ್ಲಿನ ಬಿ.ಸಿರೋಡ್ ತಾ.ಪಂ.ನ ಎಸ್ ಜಿಆರ್ ಎಸ್ ವೈ ಸಭಾಂಗಣದಲ್ಲಿ  ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಇದರ ಮಾತೃ ಪೂರ್ಣ ಯೋಜನೆಯ ಪ್ರಗತಿ ಪರಿಶೀಲನೆ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಈ ಯೋಜನೆ ಪರಿಣಾಮಕಾರಿಯಾಗಿ ಕಾರ್ಯಗತಗೊಳಿಸಲು ಅಂಗನವಾಡಿ ಇಲಾಖೆ ನೀಡಿದ ಮಾಹಿತಿಗಳನ್ನು ಗಮನದಲ್ಲಿಟ್ಟು ಸಮಸ್ಯೆಗಳ ಪರಿಹಾರಕ್ಕೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

2 (3)

ಈ ವೇಳೆ ಅಂಗನವಾಡಿ ಕಾರ್ಯಕರ್ತರು ಹಾಗೂ ಅಧಿಕಾರಿಗಳು ಮಾತ್ರ ಪೂರ್ಣ ಯೋಜನೆಯ ಅನುಷ್ಠಾನದಲ್ಲಿ ಪ್ರಗತಿ ಕುಂಠಿತಕ್ಕೆ  ಕ್ಷೇತ್ರ ಮಟ್ಟದಲ್ಲಿ ಕಂಡು ಬರುವ ನ್ಯೂನತೆಗಳ ಬಗ್ಗೆ ಸಚಿವರಿಗೆ ಮಾಹಿತಿ ನೀಡಿದರು.

By suddi9

Leave a Reply

Your email address will not be published. Required fields are marked *