ಬಂಟ್ವಾಳ: ತಾಲೂಕಿನ ಬಿ.ಸಿ.ರೋಡ್ ಸಮೀಪದ ಸಂಚಯಗಿರಿ ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರ ಮತ್ತು ತುಳು ಬದುಕು ವಸ್ತು ಸಂಗ್ರಹಾಲಯದಲ್ಲಿ ಜ.4ರಂದು ‘8ನೇ ಪರಿಚ್ಛೇದಕ್ಕೆ ಭಾಷಾ ಸೇರ್ಪಡೆ’ ಬಗ್ಗೆ ಗೋವಾ ಆಂಗ್ಲ ಭಾಷಾ ಉಪನ್ಯಾಸಕ, ತುಳು ಸಂಶೋಧಕ ಶ್ರೀಪಾದ್ ಭಟ್ ವಿಶೇಷ ಉಪನ್ಯಾಸ ನೀಡಲಿದ್ದಾರೆ.

ಅಂದು ಸಂಜೆ 4ಕ್ಕೆ ನಡೆಯುವ ಕಾರ್ಯಕ್ರಮದಲ್ಲಿ ಒಡಿಯೂರು ಗುರುದೇವಾನಂದ ಸ್ವಾಮೀಜಿ ಆಶೀರ್ವಚನ ನೀಡಲಿದ್ದು, ಹಿರಿಯ ಪತ್ರಕರ್ತ ಮನೋಹರ ಪ್ರಸಾದ್ ಮತ್ತಿತರ ಗಣ್ಯರು ಭಾಗವಹಿಸಲಿದ್ದಾರೆ ಎಂದು ಸಂಸ್ಥೆ ಮುಖ್ಯಸ್ಥ ಪ್ರೊ.ಕೆ.ತುಕಾರಾಮ ಪೂಜಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

By suddi9

Leave a Reply

Your email address will not be published. Required fields are marked *