ಚಿಕ್ಕೋಡಿ: ಕಾರೊಂದು ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ೊಂದೇ ಕುಟುಂಬದ ಮೂರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, ಮೂವರು ಗಾಯಗೊಂಡ ಘಟನೆ ಇಲ್ಲಿನ ನಿಪ್ಪಾಣಿ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಮಂಗಳವಾರ ಬೆಳಗ್ಗಿನ ಜಾವ ನಡೆದಿದೆ.
ಮುಂಬೈ ಮೂಲದವರಾದ ವಿತ್ರಿ ಗುಪ್ತಾ , ಶೋಭಾ ಗುಪ್ತಾ, ಆರತಿ ಗುಪ್ತಾ ಮೃತಪಟ್ಟವರೆಂದು ಗುರುತಿಸಲಾಗಿದೆ.
ಕಾರಿನಲ್ಲಿ ಬರುತ್ತಿದ್ದ ಈ ಕುಟುಂಬ ಗೋವಾದಲ್ಲಿ ಹೊಸ ವರ್ಷಾಚರಣೆ ಆಚರಿಸಿ ಮುಂಬೈಗೆ ವಾಪಸಾಗುತ್ತಿದ್ದ ವೇಳೆ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.
ಇನ್ನೂ ಗಾಯಗೊಂಡ ಮೃತ ಸಾವಿತ್ರಿ ಗುಪ್ತಾಳ ಪತಿ, ಸಹೋದರ ಹಾಗೂ ಕಾರು ಚಾಲಕನನ್ನು ಮಹಾರಾಷ್ಟ್ರದ ಕೊಲ್ಲಾಪೂರದ ಖಾಸಗಿ ಆಸ್ಪತ್ರೆಯೊಂದಕ್ಕೆ ಹೆಚ್ಚಿನ ಚಿಕಿತ್ಸೆಗೆ ದಾಖಲಿಸಲಾಗಿದೆ.
ಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ ಪಿಎಸ್ಸೈ ಶಶಿಕಾಂತ ವರ್ಮಾ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

