viewimage

ಪಿಲಿಕುಳ: ಅನ್ಯಕೋಮಿನ ಎರಡು ಜೋಡಿಯೊಂದಕ್ಕೆ ಹಿಂದೂ ಸಂಘಟನೆಯೊಂದರ ಕಾರ್ಯಕರ್ತರು ಹಲ್ಲೆ ನಡೆಸಿದ ಘಟನೆ ಇಲ್ಲಿನ ಮಾನಸ ವಾಟರ್ ಪಾರ್ಕ್ ನಲ್ಲಿ ಮಂಗಳವಾರ ಮಧ್ಯಾಹ್ನ ನಡೆದಿದೆ.

ಮಾನಸ ವಾಟರ್ ಪಾರ್ಕ್ ನಲ್ಲಿ ಒಂದು ಕೋಮಿನ ಯುವಕರು ಮತ್ತೊಂದು ಕೋಮಿನ ಯುವತಿಯರೊಂದಿಗೆ ನೀರಿನಲ್ಲಿ ಆಟವಾಡುತ್ತಿದ್ದಾರೆಂದು ಆರೋಪಿಸಿ ಸ್ಥಳಕ್ಕಾಗಮಿಸಿದ ಹಿಂದೂ ಸಂಘಟನೆ ಕಾರ್ಯಕರ್ತರು ಅವರ ಮೇಲೆ ಹಲ್ಲೆ ನಡೆಸಿ ನೈತಿಕ ಪೋಲಿಸ್ ಗಿರಿ ನಡೆಸಿದ್ದಾರೆ.

ಹಲ್ಲೆಗೊಳಗಾದ  ಯುವಕ-ಯುವತಿಯರು ಐಕಳ ಖಾಸಗಿ ಕಾಲೇಜಿನ ವಿದ್ಯಾರ್ಥಿಗಳಾಗಿದ್ದಾರೆ ಎಂದು ತಿಳಿದು ಬಂದಿದೆ.

ಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರು ಹಲ್ಲೆ ಮಾಡುತ್ತಿದ್ದ ಹಿಂದು ಸಂಘಟನೆಯ ಕಾರ್ಯಕರ್ತರನ್ನು ಅಲ್ಲಿಂದ ಚದುರಿಸಿ ಯುವಕ ಯುವತಿಯರು ವಶಕ್ಕೆ ಪಡೆದಿದ್ದಾರೆ.

ಯುವ ಜೋಡಿಯ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಸಂಪತ್ ಶೆಟ್ಟಿ ಎಂಬಾತನನ್ನು ಬಂಧಿಸಲಾಗಿದ್ದು, ವಿಚಾರಣೆ ಮುಂದುವರಿದಿದೆ.  ಆತನೊಂದಿಗೆ ಇನ್ನೂ ಮೂವರು ಭಾಗಿಯಾಗಿದ್ದು, ಅವರ ಪತ್ತೆಗೆ ಕಾರ್ಯಾಚರಣೆ ಮುಂದುವರಿದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಥಳಿತಕ್ಕೆ ಆಕ್ರೋಶ: ಹಿಂದೂ ಕಾರ್ಯಕರ್ತರು ಪೊಲೀಸರ ಸಮ್ಮುಖದಲ್ಲೇ ಯುವತಿ ಎನ್ನದೇ ಹಲ್ಲೆನಡೆಸಿದ್ದು, ಈ ಬಗ್ಗೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

 

 

By Suddi9

Leave a Reply

Your email address will not be published. Required fields are marked *