anna-hazare-701x463

ಧಾರವಾಡ: ಪ್ರಧಾನಿ ನರೇಂದ್ರ ಮೋದಿ ಅವರು ಈ ದೇಶದ ರೈತರನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿದ್ದಾರೆ ಎಂದು ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಆರೋಪಿಸಿದ್ದಾರೆ.

ಇಲ್ಲಿನ ಕೃಷಿ ವಿಶ್ವವಿದ್ಯಾನಿಲಯದಲ್ಲಿ ಆಯೋಜಿಸಿದ್ದ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬಂದಿದ್ದ ವೇಳೆ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ನರೇಂದ್ರ ಮೋದಿ ಅವರು ಅಧಿಕಾರಕ್ಕೆ ಬಂದು ಮೂರೂವರೆ ವರ್ಷಗಳಾಗಿದ್ದು, ರೈತರಿಗೆ ಉತ್ತಮ ಯೋಜನೆ ಜಾರಿಗೆ ತಂದಿಲ್ಲ. ಅಲ್ಲದೆ, ಅವರಿಗೆ ಮೂಲಭೂತ ಸೌಲಭ್ಯ ಕೂಡ ಒದಗಿಸಿಲ್ಲ. ಇದಕ್ಕಾಗಿ ಮಾ. 23 ರಂದು ದಿಲ್ಲಿಯಲ್ಲಿ ರಯತರ ಆಂದೋಲನ ನಡೆಯಲಿದ್ದು, ಈ ಬಗ್ಗೆ ಜನಜಾಗೃತಿ ಮೂಡಿಸಲು ದೇಶದಾದ್ಯಂತ ಪ್ರವಾಸ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಉತ್ತರ ಕರ್ನಾಟಕ ಭಾಗದಲ್ಲಿ ನೀರಿನ ಸಮಸ್ಯೆ ಗಂಭೀರವಾಗಿದ್ದರೆ, ಕರ್ನಾಟಕಕ್ಕೆ ನೀರು ಹರಿಸಬೇಕೆಂದು ಒತ್ತಾಯಿಸಿ ಗೋವಾ ಸಿಎಂ ಗೆ ಪತ್ರ ಬರೆಯುತ್ತೇನೆ ಎಂದವರು, ಕರ್ನಾಟಕ ಮತ್ತು ಮಹಾರಾಷ್ಟ್ರ ಸರ್ಕಾರಗಳು ಸೌಹಾರ್ದದಿಂದ ಬೆಳಗಾವಿ ಗಡಿ ವಿವಾದವನ್ನೂ ಬಗೆಹರಿಸಿಕೊಳ್ಳಬೇಕು ಎಂದು ಸಲಹೆ ನಿಡಿದರು.

By suddi9

Leave a Reply

Your email address will not be published. Required fields are marked *