ಕಲಬುರಗಿ: ಸರ್ಕಾರಿ ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಸೇಡಂ ತಾಲೂಕಿನ ಕೋಡ್ಲಾ ಗ್ರಾಮದ ಬಳಿ ಬುಧವಾರ ನಡೆದಿದೆ.
ಕೋಡ್ಲಾ ಗ್ರಾಮದ ನಿವಾಸಿಗಳಾದ ಸಿದ್ಧಪ ಶರಣಪ್ಪ ಕುಂಬಾರ (17), ಅಂಬರೀಷ್ ಅಶೋಕ ಗುತ್ತೇದಾರ್ (24) ಮೃತಪಟ್ಟವರೆಂದು ಗುರುತಿಸಲಾಗಿದೆ.
ಈ ಬಗ್ಗೆ ಸೇಡಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

