ಮಂಗಳೂರು: ನಗರದ ಸುರತ್ಕಲ್ ಕಾಟಿಪಳ್ಳದಲ್ಲಿ ಯುವಕ ದೀಪಕ್ ನನ್ನು ಹತ್ಯೆ ಮಾಡಿದ ಪ್ರಕರಣ ಸಂಬಂಧಿಸಿದಂತೆ ಪ್ರಮುಖ ಆರೋಪಿಗಳನ್ನು ವಶಪಡಿಸಿಕೊಳ್ಳುವಲ್ಲಿ ಸುರತ್ಕಲ್ ಪೊಲೀಸರು ಯಶಸ್ವಿಯಾಗಿದ್ದಾರೆ.
ಇಲ್ಲಿನ ಮಿಜಾರು ಬಳಿ ಪೊಲೀಸರು ಆರೋಪಿಗಳ ಕಾರನ್ನು ಚೇಸ್ ಮಾಡಿ ಫೈರಿಂಗ್ ಮಾಡುವ ಮೂಲಕ 4 ಆರೋಪಿಗಳನ್ನು ಸೆರೆ ಹಿಡಿದಿದ್ದಾರೆ ಎಂದು ತಿಳಿದು ಬಂದಿದೆ.
ಇದರಲ್ಲಿ ಓರ್ವ ಆರೋಪಿಯ ಕಾಲಿಗೆ ಗುಂಡು ತಗುಲಿದೆನ್ನುವ ಮಾಹಿತಿ ಲಭ್ಯವಾಗಿದೆ. ಆರೋಪಿಗಳ ಹೆಸರನ್ನು ಪೊಲೀಸು ಇನ್ನೂ ತಿಳಿಸಿಲ್ಲ.
“ಶಂಕಿತರನ್ನು ವಶಕ್ಕೆ ಪಡೆಯಲಾಗಿದ್ದು, ಇವರೇ ಪ್ರಮುಖ ಆರೋಪಿಗಳೇ ಎಂಬುದರ ಬಗ್ಗೆ ವಿಚಾರಣೆ ನಡೆಯುತ್ತಿದೆ” ಎಂದು ಹಿರಿಯ ಪೊಲೀಸ್ ಅಧಿಕಾರಿಯೋರ್ವರು ಮಾಹಿತಿ ನೀಡಿದ್ದಾರೆ.

