ಬಂಟ್ವಾಳ: ತಾಲೂಕಿನ ಕಲ್ಲಡ್ಕದಲ್ಲಿ ಜಲೀಲ್ ಕೊಲೆ ಆರೋಪಿಯೋರ್ವನಿಗೆ ಚೂರಿ ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಗಳನ್ನು ಬಂಧಿಸುವಲ್ಲಿ ಬಂಟ್ವಾಳ ನಗರ ಪೊಲೀಸರು ಬುಧವಾರ ಯಶಸ್ವಿಯಾಗಿದ್ದಾರೆ.
ಬಂಧಿತರನ್ನು ಮೊಹಮ್ಮದ್ ಇಕ್ಬಾಲ್, ನಿಝಾಮ್ ಹಾಗೂ ಮೊಹಮ್ಮದ್ ಶರೀಫ್ ಎಂದು ಗುರುತಿಸಲಾಗಿದ್ದು, ಆರೋಪಿಗಳು ಕಲ್ಲಡ್ಕ ಮತ್ತು ಪಾಣೆಮಂಗಳೂರಿನ ನಿವಾಸಿಗಳೆಂದು ತಿಳಿದು ಬಂದಿದೆ.
ಜಲೀಲ್ ಕೊಲೆ ಪ್ರಕರಣದ ಆರೋಪಿ ಕಲ್ಲಡ್ಕದ ನಿವಾಸಿ ಕೇಶವ ಎಂಬಾತನಿಗೆ ಕಳೆದ ತಿಂಗಳಲ್ಲಿ ಹೆಲ್ಮೆಟ್ ಧರಿಸಿ ಬಂದ ದುಷ್ಕರ್ಮಿಗಳು ಚೂರಿ ಇರಿದಿದ್ದು, ಈ ಪ್ರಕರಣ ಸಂಬಂಧಿಸಿದಂತೆ ಮೂವರನ್ನು ಬಂಧಿಸಿ, ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೋರ್ವರು ಮಾಹಿತಿ ನೀಡಿದ್ದಾರೆ.

