ಮಂಗಳೂರು: ದುಷ್ಕರ್ಮಿಗಳಿಂದ ಹತ್ಯೆಗೀಡಾದ ದೀಪಕ್ ರಾವ್ ಕುಟುಂಬಕ್ಕೆ ರಾಜ್ಯ ಸರಕಾರ 10ಲಕ್ಷ ರೂ. ಪರಿಹಾರ ಘೋಷಿಸಿದೆ ಎಂದು ದ.ಕ.ಜಿಲ್ಲಾಧಿಕಾರಿ ಶಸಿಕಾಂತ್ ಸೆಂಥಿಲ್ ತಿಳಿಸಿದ್ದಾರೆ.
ದೀಪಕ್ ಮೃತದೇಹವನ್ನು ಅಂತ್ಯ ಸಂಸ್ಕಾರಕ ನಡೆಸುವ ಮುನ್ನ ರಾಜ್ಯ ಸರಕಾರ 25ಲಕ್ಷ ರೂ. ಪರಿಹಾರ ನೀಡಬೇಕೆಂದು ಆಗ್ರಹಿಸುತ್ತಿರುವ ದೀಪಕ್ ಕುಂಬಸ್ಥರು ಹಾಗೂ ಬಿಜೆಪಿ ಕಾರ್ಯಕತರನ್ನು ಮನವೊಲಿಸಲು ಸ್ಥಳಕ್ಕೆ ಭೇಟಿ ನೀಡಿ ಅವರು ಮಾತನಾಡಿದರು.
ಈಗಾಗಲೇ ಮೃತ ದೀಪಕ್ ಕುಟುಂಬಕ್ಕೆ ರಾಜ್ಯ ಸರಕಾರ 5 ಲಕ್ಷ ಹಾಗೂ ಸಿಎಂ ವಿಶೇಷ ಪರಿಹಾರ ನಿಧಿಯಿಂದ 5ಲಕ್ಷ ರೂ. ಪರಿಹಾರ ಘೋಷಿಸಿದ್ದು, ಆದ್ದರಿಂದ ಮೃತದೇಹವನ್ನು ಅಂತ್ಯಸಂಸ್ಕಾರಕ್ಕೆ ಅನುವು ಮಾಡಿಕೊಡಬೇಕೆಂದು ಅವರು ಮನವಿ ಮಾಡಿದರು.
ಇದಕ್ಕೆ ಪ್ರತಿಕ್ರಿಯೆ ನೀಡಿ ಮಾತನಾಡಿದ ಸತ್ಯಜಿತ್ ಸುರತ್ಕಲ್, ಮೃತಪಟ್ಟ ದೀಪಕ್ ಕುಟುಂಬವನ್ನು ಬಡವರೆಂದು ಪರಿಗಣಿಸಿ ರಾಜ್ಯ ಸರಕಾರ 25ಲಕ್ಷ ರೂ. ಪರಿಹಾರ ನೀಡಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಬಳಿಕ ಸ್ಥಳೀಯರು ದೀಪಕ್ ಮೃತದೇಹವನ್ನು ಆ್ಯಂಬುಲೆನ್ಸ್ ನಿಂದ ಕೆಳಗಿಳಿಸಿ ಸಾರ್ವಜನಿಕರ ದರ್ಶನಕ್ಕೆ ಇಡಲಾಯಿತು.
ಶವಯಾತ್ರೆ ಆರಂಭ: ಇದೀಗಾ ಮೃತದೇಹವನ್ನು ಮೆರವಣಿಗೆ ನಡೆಸಿ ಅಂತ್ಯಸಂಸ್ಕಾರ ನಡೆಸಲು ಕುಟುಂಸ್ಥರು ಹಾಗೂ ಸ್ಥಳೀಯು ಮುಂದಾಗಿದ್ದಾರೆ.

