ಬಂಟ್ವಾಳ: ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ಪೆಟ್ರೋಲ್ ಬಂಕ್‍ಗಳ ಶೌಚಾಲಯಗಳನ್ನು ಸಾರ್ವಜನಿಕರ ಬಳಕೆಗೆ ಕಡ್ಡಾಯವಾಗಿ ಒದಗಿಸುವಂತೆ ಸೂಚಿಸಲಾಗಿದೆ. ಬಂಟ್ವಾಳ ಪುರಸಭಾ ವ್ಯಾಪ್ತಿಯ ಎಲ್ಲಾ ಪೆಟ್ರೋಲ್ ಬಂಕ್‍ಗಳಲ್ಲಿ ಸಾರ್ವಜನಿಕರು ಈ ಸೌಲಭ್ಯ ಪಡೆದುಕೊಳ್ಳುವಂತೆ ಪ್ರಕಟಣೆ ತಿಳಿಸಿದೆ.
