Fsuicide_alvas

ಮೂಡುಬಿದಿರೆ: ಹುಟ್ಟುಹಬ್ಬದಿ ಆಚರಿಸಿ ವಿರ್ದಾರ್ಥಿಯೋರ್ವ ಡೆತ್ ನೋಟ್ ಬರೆದು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಲ್ಲಿನ ಆಳ್ವಾಸ್ ಕ್ಯಾಂಪಸ್ ನ ನಂದಿನಿ ಹಾಸ್ಟೆಲ್‍ನಲ್ಲಿ  ಸೋಮವಾರ ರಾತ್ರಿ ನಡಿದಿದೆ.

ಆಳ್ವಾಸ್ ಕಾಲೇಜಿನ ಪಿಯುಸಿ ವಿದ್ಯಾರ್ಥಿಯಾಗಿದ್ದ ಬೆಂಗಳೂರಿನ ಅಬ್ಬಿಗೆರೆ ಮೂಲದ ತೇಜಸ್ (16) ಆತ್ಮಹತ್ಯೆ ಮಾಡಿಕೊಂಡವ ಎಂದು ಗುರುತಿಸಲಾಗಿದೆ.

ನಿನ್ನೆ ಈತನ ಹುಟ್ಟು ಹಬ್ಬದ ದಿನವಾಗಿದ್ದು, ಈ ಹಿನ್ನೆಲೆಯಲ್ಲಿ ಆತನ ಪೋಷಕರು ಇಲ್ಲಿಗೆ ಬಂದು ಆಚರಿಸಿ ವಾಪಸ್ ತೆರಲಿದ್ದರು. ಬಳಿಕ ತೇಜಸ್, 7:30ರ ವೇಳೆಗೆ ಡೆತ್ ನೋಟ್ ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದ ತಿಳಿದು ಬಂದಿದೆ.

ತೇಜಸ್ ತಾಯಿ ಮೃತಪಟ್ಟಿದ್ದು, ತಂದೆಗೆ ಬೆನ್ನು ನೋವಿನಿಂದ ಬಳಲುತ್ತಿದ್ದರು. ಇದರಿಂದ ನೊಂದುಕೊಂಡಿದ್ದ ತೇಜಸ್ ಡೆತ್ ನೋಟ್ ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.

ಇನ್ನೂ ಪೊಲೀಸರು ತೇಜಸ್ ಬರೆದಿರುವ ಡೆತ್‍ನೋಟ್ ವಶಪಡಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.

ಈ ಬಗ್ಗೆ ಮೂಡಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

By suddi9

Leave a Reply

Your email address will not be published. Required fields are marked *