ಮಡಿಕೇರಿ: ಕಾಂಗ್ರಸ್ ಯಾವುದೇ ಪಕ್ಷದೊಂದಿಗೆ ಚುನಾವಣೆ ಪೂರ್ವ ಹಾಗೂ ಚುನಾವಣೆ ಬಳಿಕ ಮೈತ್ರಿ ಮಾಡಲ್ಲ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಇಂದು ಕ್ರಿಸ್ಟಲ್ ಹಾಲ್‌ನಲ್ಲಿ ನಡೆಯಲಿರುವ ಕಾಂಗ್ರಸ್ ಸಾಧನಾ ಸಮಾವೇಶದಲ್ಲಿ ಭಾಗವಹಿಸಲು ನಗರಕ್ಕೆ ಹೆಲಿಪ್ಯಾಡ್ ಮೂಲಕ ಆಗಮಿಸಿ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಕ್ಷೇತ್ರ ಬದಲಾವಣೆ ಮಾಡುವುದಿಲ್ಲ ಎಮದ ಎಂದವರು, ಕೋಮಭಾವನೆಗೆ ಪ್ರಚೋದನೆ ನೀಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ದೀಪಕ್ ರಾವ್ ಕೊಲೆ ಪ್ರಕರಣ ಸಂಬಂಧಿಸಿದಂತೆ ಹೇಳಿಕೆ ನೀಡಿರುವ ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಅಗತ್ಯ ದಾಖಲೆಗಳು ಇದ್ದರೆ ಬಿಡುಗಡೆ ಮಾಡಲಿ ಎಂದ ತಿಳಿಸಿದರು.
ಕೊಡಗಿನ ಕಾವೇರಿ ಹಾಗೂ ಪೊನ್ನಂಪೇಟೆ ತಾಲೂಕು ರಚನೆ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

