ಬೀದರ್: ಭೀಮಾ ಕೋರೆಗಾಂವ್ ನಲ್ಲಿ ದಲಿತರ ಮೇಲೆ ನಡೆದ ಹಿಂಸಾಚಾರ ಖಂಡಿಸಿ ಬೀದರ್ ನಲ್ಲಿ ದಲಿತ ಪರ ಸಂಘಟನೆಗಳು ನೀಡಿದ್ದ ಬಂದ್ ಕರೆ ವಿಕೋಪಕ್ಕೆ ತಿರುಗಿ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿ ಪ್ರಹಾರ ಮಾಡಿದ ಘಟನೆ ಮಂಗಳವಾರ ನಡೆದಿದೆ.
ನಗರದಲ್ಲಿ ದಲಿತ ಪರ ಸಂಘಟನೆಗಳು ನೀಡಿದ್ದ ಬಂದ್ ಕರೆಗೆ ಬೆಂಬಲ ಸೂಚಿಸದ ಕೆಲವೊಂದು ಅಂಗಡಿ ಮುಗ್ಗಟ್ಟುಗಳನ್ನು ಪ್ರತಿಭಟನಾಕಾರರು ಒತ್ತಾಯ ಪೂರ್ವಕವಾಗಿ ಮುಚ್ಚಿಸಲು ಅಂಗಡಿಗಳ ವಸ್ತುಗಳನ್ನು ಧ್ವಂಸಗೊಳಿಸಿದ್ದಾರೆ. ಅಲ್ಲದೆ, ಸಂಚರಿಸುತ್ತಿದ್ದ ಬೈಕ್ ಸವಾಸರಿಗೂ ಉದ್ರಿಕ್ತ ಪ್ರತಿಭಟನಕಾರರು ಹಲ್ಲೆ ನಡೆಸಿ, ಬೈಕ್ ಜಖಂ ಗೊಳಿಸಿದ್ದಾರೆ.
ಇದರಿಂದ ಎಚ್ಚೆತ್ತ ಪೊಲೀಸರು ಪರಿಸ್ಥಿತಿ ನಿಯಂತ್ರಣಕ್ಕೆ ತರಲು ಪ್ರತಿಭಟನಾನಿರತರ ಮೇಲೆ ಲಾಠಿ ಪ್ರಹಾರ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.


