ಬೆಂಗಳೂರು: ರಾಜ್ಯದಲ್ಲಿ ಕೊಲೆ, ಅತ್ಯಾಚಾರ ಹಾಗೂ ದರೋಡೆಗಳಂತಹ ಪ್ರಕರಣಗಳು ಹೆಚ್ಚಾಗುತ್ತಿದ್ದು, ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ ಎಂದು ವಿರೋಧ ಪಕ್ಷ ನಾಯಕ ಜಗದೀಶ್ ಶೆಟ್ಟರ್ ಆರೋಪಿಸಿದ್ದಾರೆ.
ಮಂಗಳವಾರ ನಗರದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು.
ರಾಜ್ಯದಲ್ಲಿ ಕೇರಳ ಮಾದರಿಯಲ್ಲಿ ಅಪರಾಧಗಳು ನಡೆಯುತ್ತಿದ್ದು, ಇದಕ್ಕೆಲ್ಲ ಕೆಎಫ್ ಡಿ, ಪಿಎಫ್ ಐ ಸಂಘಟನೆಗಳು ಕಾರಣವಾಗಿವೆ. ಇಂತಹ ಸಂಘಟನೆಗಳನ್ನು ಸಿಎಂ ಸಿದ್ದರಾಮಯ್ಯ ನಿಷೇಧಿಸಲು ಹಿಂದೇಟು ಹಾಕುತ್ತಿದ್ದು, ಬರೀ ಕೇಂದ್ರ ಸರ್ಕಾರದ ಮೇಲೆ ಬೊಟ್ಟು ಮಾಡುತ್ತಿದ್ದಾರೆ ಎಂದು ದೂರಿದರು.

