ಮಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 33ನೇ ರಾಜ್ಯ ಪತ್ರಕರ್ತರ ಸಮ್ಮೇಳನ ಜ.20ರಿಂದ ಹಾಸನ ಜಿಲ್ಲೆಯ ಶ್ರವಣಬೆಳಗೊಳದಲ್ಲಿ ನಡೆಯಲಿದೆ.

ಈ ಸಮ್ಮೇಳನದಲ್ಲಿ ಭಾಗವಹಿಸಲು ಇಚ್ಛಿಸುವವರು ಜ.11ರೊಳಗೆ ತಮ್ಮ ಹೆಸರನ್ನು ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕಚೇರಿಯಲ್ಲಿ ನೋಂದಾಯಿಸಬೇಕು ಎಂದು ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ನಾಯಕ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

By suddi9

Leave a Reply

Your email address will not be published. Required fields are marked *