1 (3)

ಬಂಟ್ವಾಳ: ಕಾರೊಂದು ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಮಕ್ಕಳು ಸೇರಿ ಒಂದೇ ಕುಟುಂಬದ ಐದು ಮಂದಿ ಗಂಭೀರ ಗಾಯಗೊಂಡ ಘಟನೆ ಇಲ್ಲಿನ ಮಣಿಹಳ್ಳ ಸಮೀಪದ ಬಡಗುಂಡಿಯಲ್ಲಿ ಬುಧವಾರ ನಡೆದಿದೆ.

ಬಡಗುಂಡಿ ನಿವಾಸಿಗಳಾದ ಜರ್ಮನ್, ರೋಶನ್, ಲವಿಟ, ಸಿಸಿಲಿಯಾ ಬರೆಟ್ಟೋ , ಒಮ್ನಿ ಚಾಲಕ ರೋಬಿನ್ ಗಾಯಾಳುಗಳೆಂದು ಗುರುತಿಸಲಾಗಿದೆ.

2 (3)

ರೋಶನ್ ಅವರು ಗಲ್ಪ್ ನಲ್ಲಿ ಉದೋಗಿಯಾಗಿದ್ದು, ಇತ್ತೀಚೆಗೆ ಊರಿಗೆ ಬಂದಿದ್ದರು. ಅವರು ಕುಟುಂಬ ಸಮೇತ ಮಂಗಳೂರಿನ ಬೀಚ್ ಗೆ ತೆರಳಿ ವಾಪಾಸು ಮನೆಗೆ ಬರುತ್ತಿದ್ದ ವೇಳೆ ಬಡಗುಂಡಿ ತಿರುವಿನಲ್ಲಿ ಚಾಲಕನ ನಿಯಂತ್ರಣ ಕಳೆದು ಮರಕ್ಕೆ ಢಿಕ್ಕಿಯಾಗಿದೆ ಎಂದು ತಿಳಿದು ಬಂದಿದೆ.

ಗಾಯಾಳುಗಳನ್ನು ನಗರದ ಆಸ್ಪತ್ರೆಗೆ ದಾಖಲಿಸಲಾಗಿದೆ.

4 (3)

ಸುದ್ದಿ ತಿಳಿದು ಬಂಟ್ವಾಳ ಟ್ರಾಫಿಕ್ ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿದ್ದಾರೆ.

By suddi9

Leave a Reply

Your email address will not be published. Required fields are marked *