ಚಿಕ್ಕೋಡಿ: ಟಿಪ್ಪರ್ ಹಾಗೂ ಬೈಕ್ ನಡುವೆ ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ಮಹಿಳೆಯೋರ್ವರು ಸ್ಥಳದಲ್ಲಿಯೇ ಮೃಪಟ್ಟರೆ, ಓರ್ವ ಗಾಯಗೊಂಡ ಘಟನೆ ತಾಲೂಕಿನ ರುಪಿನಾಳ ಗ್ರಾಮದ ಬಳಿ ಗುರುವಾರ ನಡೆದಿದೆ.
ಮೃತರನ್ನು ರಾಯಬಾಗ ತಾಲೂಕಿನ ಬಿರಡಿ ಗ್ರಾಮದ ಮಾಸಾಯಿ ಮುಲ್ಲಾ(31) ಎಂದು ಗುರುತಿಸಲಾಗಿದೆ.
ಇನ್ನೂ ಘಟನೆಯಲ್ಲಿ ಗಾಯಗೊಂಡಿದ್ದ ಬೈಕ್ ಸವಾರ ಬಾಬಾಲಾಲ ಮುಲ್ಲಾ ಅವರನ್ನು ಚಿಕ್ಕೋಡಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಬಗ್ಗೆ ಅಂಕಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

