ಮಂಗಳೂರು: ರಾಜ್ಯದಲ್ಲಿ ಅಶಾಂತಿ ಸೃಷ್ಟಿಸುವ ಅಮಿತ್ ಶಾ ಒಬ್ಬ ಶಕುನಿ ಎಂದು ವಿಧಾನ ಪರಿಷತ್ ಮುಖ್ಯ ಸಚೇತಕ ಐವನ್ ಡಿ’ಸೋಜ ಏಕವಚನದಲ್ಲಿ ವ್ಯಂಗ್ಯವಾಡಿದ್ದಾರೆ.
ಗುರುವಾರ ನಗರದ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು.
ಅಮಿತ್ ಶಾ ರಾಜ್ಯಕ್ಕೆ ಕಾಲಿಡುವುದೇ ಅಶಾಂತಿ ಸೃಷ್ಟಿ ಮಾಡಲು ಹಾಗೂ ಒಡೆದು ಆಳುವ ನೀತಿಯನ್ನು ಅನುಸರಿಸಲು ಎಂದು ಹೇಳಿದ್ದಾರೆ. ಅವರು ರಾಜ್ಯಕ್ಕೆ ಬಂದಾಗ ಇಲ್ಲಿನ ಕಾನೂನು ವ್ಯವಸ್ಥೆಯನ್ನು ಹದಗೆಡಿಸುವ ಹೇಳಿಕೆಗಳನ್ನು ನೀಡುವ ಮೂಲಕ ಪ್ರಚೋದನಕಾರಿಯಾಗಿ ಮಾತನಾಡುತ್ತಾರೆ ಎಂದು ದೂರಿದರು.
ಕೇಂದ್ರ ಸರಕಾರ ಯಾಕೆ ಕೆಎಪ್ ಡಿ ಸಂಘಟನೆಯನ್ನು ಬ್ಯಾನ್ ಮಾಡಲು ಮುಂದಾಗಿಲ್ಲ ಎಂದು ಪ್ರಶ್ನಿಸಿದ ಅವರು, ರಾಜ್ಯದಲ್ಲಿ ಚುಕ್ಕಾಣಿ ಹಿಡಿದಿರುವ ಅತ್ಯುತ್ತಮ ಕಾಂಗ್ರೆಸ್ ನೇತೃತ್ವದ ಸರ್ಕಾರ ಕಂಡು ವಿರೋಧ ಪಕ್ಷ ಬಿಜೆಪಿಗೆ ನಮ್ಮ ವಿರುದ್ಧ ಒಂದೇ ಒಂದು ಭ್ರಷ್ಟಚಾರದ ಆರೋಪ ಹೊರಿಸಲು ಸಾಧ್ಯವಾಗಿಲ್ಲ ಎಂದರು.
ಈ ಸಂದರ್ಭದಲ್ಲಿ ಮುಖಂಡರಾದ ಇಬ್ರಾಹೀಂ ಕೋಡಿಜ್ಜಾಲ್, ಆರೀಫ್ ಬಾವ, ಸತೀಶ್ ಮತ್ತಿತರರು ಉಪಸ್ಥಿತರಿದ್ದರು.

