ಬಂಟ್ವಾಳ:ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಶಿಕ್ಷಣ ಸಂಸ್ಥೆಯ ಆಧಾರಸ್ತಂಭವಾಗಿದ್ದು, ಸಾಧನೆ ಮೂಲಕ ಕೀರ್ತಿ ಪತಾಕೆ ಹಾರಿಸಲು ಸಾಧ್ಯವಿದೆ ಎಂದು ಮಂಗಳೂರಿನ ಶ್ರೀನಿವಾಸ್ ವಿಶ್ವವಿದ್ಯಾನಿಲಯ ಉಪ ಕುಲಪತಿ ಸಿ.ಎ.ರಾಘವೇಂದ್ರ ರಾವ್ ಹೇಳಿದ್ದಾರೆ.
ಬಂಟ್ವಾಳ ಎಸ್ವಿಎಸ್ ಪದವಿ ಮತ್ತು ಪದವಿಪೂರ್ವ ಕಾಲೇಜಿನಲ್ಲಿ ಭಾನುವಾರ ನಡೆದ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕಾಲೇಜಿನ ಸ್ಥಾಪಕ ಪ್ರಾಂಶುಪಾಲ ಪ್ರೊ.ಯು.ದೇವದಾಸ್ ನಾಯಕ್ ಸಭಾ ಕಾರ್ಯಕ್ರಮ ಉದ್ಘಾಟಿಸಿದರು. ಕಾಲೇಜಿನ ಪ್ರಾಂಶುಪಾಲ ಡಾ.ಪಾಂಡುರಂಗ ನಾಯಕ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಜಿಲ್ಲಾ ಅಪರಾಧ ಪತ್ತೆ ದಳ ಇನ್ಸ್ಪೆಕ್ಟರ್ ಅಮಾನುಲ್ಲಾ ಶುಭ ಹಾರೈಸಿದರು.
ಇದೇ ವೇಳೆ ನಿವೃತ್ತ ಪ್ರಾಂಶುಪಾಲ ಪ್ರೊ.ಕೆ.ಶಂಕರ ಭಟ್, ಪ್ರೊ.ವೃಷಭರಾಜ ಇಂದ್ರ, ಡಾ.ಸುಂದರ ಮೊಯಿಲಿ, ಪ್ರೊ.ರಾಜಮಣಿ ರಾಮಕುಂಜ ಇವರನ್ನು ಸನ್ಮಾನಿಸಲಾಯಿತು. ನಾರಾಯಣ ಕಾಮತ್ ಸ್ವಾಗತಿಸಿ, ಕವಿತಾ ವಂದಿಸಿದರು.
—
