ಬಂಟ್ವಾಳ: ತಾಲ್ಲೂಕಿನ ರಾಯಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೈತ್ರೋಡಿ -ಪುಂಚೋಡಿ ಸಂಪರ್ಕಿಸುವ ಹದಗೆಟ್ಟ ರಸ್ತೆಯಲ್ಲಿ ಬಿಜೆಪಿ ಮುಖಂಡ ಉಳಿಪಾಡಿಗುತ್ತು ರಾಜೇಶ ನಾಯ್ಕ್ ನೇತೃತ್ವದಲ್ಲಿ ‘ಪರಿವರ್ತನೆಗಾಗಿ ಗ್ರಾಮದೆಡೆಗೆ ಬಿಜೆಪಿ ನಡಿಗೆ’ ಕಾಲ್ನಡಿಗೆ ಜಾಥಾ ಮಂಗಳವಾರ ನಡೆಯಿತು.
ಕ್ಷೇತ್ರಾಧ್ಯಕ್ಷ ಬಿ.ದೇವದಾಸ ಶೆಟ್ಟಿ, ಪ್ರಮುಖರಾದ ಜಿ.ಆನಂದ, ಸೀತಾರಾಮ ಪೂಜಾರಿ, ವಸಂತ ಕುಮಾರ್ ಅಣ್ಣಳಿಕೆ, ದಿನೇಶ ಅಮ್ಟೂರು, ಸಂತೋಷ್ ಕುಮಾರ್ ಬೆಟ್ಟು, ಹರೀಶ ಆಚಾರ್ಯ, ಪುರುಷೋತ್ತಮ ಶೆಟ್ಟಿ ಮತ್ತಿತರರು ಇದ್ದರು.
