ಬೆಂಗಳೂರು: ಜೆಡಿಎಸ್ ಶಾಸಕರಾದ ಮಾನಪ್ಪ ವಜ್ಜಲ ಹಾಗೂ ಡಾ. ಶಿವರಾಜ ಪಾಟೀಲ ಪಕ್ಷದ ಮುಖಂಡರ ಸಮ್ಮುಖದಲ್ಲಿ ಬಿಜೆಪಿಗೆ ಗುರುವಾರ ಪಕ್ಷದ ಕಚೇರಿಯಲ್ಲಿ ಸೇರ್ಪಡೆಗೊಂಡರು.
ಈ ವೇಳೆ ಮಾತನಾಡಿದ ಬಿ.ಎಸ್. ಯಡಿಯೂರಪ್ಪ, ರಾಜ್ಯದಲ್ಲಿ ಬಿಜೆಪಿಗೆ ಸೇರ್ಪಡೆಗೊಳ್ಳುವ ಶಾಸಕರ ದೊಡ್ಡ ಪಟ್ಟಿಯೇ ಇದ್ದು, ಪ್ರಾರಂಭಿಕವಾಗಿ ಇಬ್ಬರು ಶಾಸಕರು ಪಕ್ಷ ಸೇರಿದ್ದಾರೆ ಎಂದು ವಿವರಿಸಿದರು.
ಕೇಂದ್ರ ಸಚಿವ ಪೀಯೂಷ್ ಗೋಯಲ್ ಮಾತನಾಡಿ, ಜೆಡಿಎಸ್ ಒಂದು ಪ್ರದೇಶಕ್ಕೆ ಸೀಮಿತವಾಗಿದ್ದು, ಬಿಜೆಪಿ ಜಗತ್ತಿಗೆ ಸೀಮಿತಿವಾಗಿದೆ. ಜೆಡಿಎಸ್ ಜತೆ ಮೈತ್ರಿ ಮಾಡಿಕೊಳ್ಳವ ಉದ್ದೇಶ ನಮಗಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.
ಮಾನಪ್ಪ ವಜ್ಜಲ ಮಾತನಾಡಿ, ಕಳೆದ ಒಂದು ವರ್ಷದಿಂದ ಸಾಕಷ್ಟು ನೋವು ಅನುಭವಿಸಿದ್ದೇವೆ. ಹೀಗಾಗಿ ಶಾಸಕ ಸ್ಥಾನ ಹಾಗೂ ಜೆಡಿಎಸ್ನ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದೇನೆ. ಮುಂದಿನ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸುತ್ತೇನೆ ಎಂದರು.
ಶಿವರಾಜ ಪಾಟೀಲ ಮಾತನಾಡಿ, ‘ಜೆಡಿಎಸ್ನಲ್ಲಿ ನಮ್ಮ ಮಾತಿಗೆ ಮನ್ನಣೆ ಇರಲಿಲ್ಲ. ಇದರಿಂದ ಬೇಸತ್ತು ಪಕ್ಷ ತೊರೆದಿದ್ದೇವೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಪಕ್ಷದ ರಾಜ್ಯಧ್ಯಕ್ಷ ಬಿ.ಎಸ್. ಯಡಿಯೂರಪ್ಪ, ಕೇಂದ್ರ ಸಚಿವರಾದ ಅನಂತಕುಮಾರ್, ಪೀಯೂಷ್ ಗೋಯಲ್, ಪಕ್ಷದ ರಾಜ್ಯ ಉಸ್ತುವಾರಿ ಮುರುಳೀಧರ ರಾವ್, ಶಾಸಕ ಆರ್. ಅಶೋಕ್

