454

ಖಜಕಿಸ್ತಾನ: ಚಲಿಸುತ್ತಿದ್ದ ಬಸ್‌‌ವೊಂದಕ್ಕೆ ಆಕಸ್ಮಿಕ ಬೆಂಕಿ ಹತ್ತಿಕೊಂಡ ಪರಿಣಾಮ ಬಸ್ ನಲ್ಲಿದ್ದ 52 ಮಂದಿ ಪ್ರಯಾಣಿಕರು ಸಜೀವ ದಹನವಾಗಿರುವ ಘಟನೆ ವಾಯುವ್ಯ ಖಜಕಿಸ್ತಾನದಲ್ಲಿ ಗುರುವಾರ  ನಡೆದಿದೆ.

ಬಸ್‌‌ ಚಲಿಸುತ್ತಿದ್ದ ವೇಳೆ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ಬಳಿಕ ಹೊತ್ತಿ ಉರಿಯಲಾರಂಭಿಸಿದ್ದ ಪರಿಣಾಮ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ 55 ಮಂದಿ ಸಜೀವ ದಹನವಾದರೆ, ಐವರು ಗಂಭೀರವಾಗಿ ಗಾಯಗೊಂಡು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

ಈ ಘಟನೆಗೆ ಮೂಲ ಕಾರಣ ತಿಳಿದುಬಂದಿಲ್ಲ. ಇನ್ನೂ ಅಗ್ನಿ ಅವಘಡದಲ್ಲಿ ಬೆಂಕಿಯ ಕೆನ್ನಾಲಿಗೆಗೆ ಬಸ್ ಸಂಪೂರ್ಣ ಸುಟ್ಟು ಭಸ್ಮವಾಗಿದೆ.

 

By suddi9

Leave a Reply

Your email address will not be published. Required fields are marked *