ಕಾಸರಗೋಡು: ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಕಾಲೇಜು ವಿದ್ಯಾರ್ಥಿಗಳನ್ನು ಕಾಸರಗೋಡು ನಗರ ಠಾಣಾ ಪೊಲೀಸರು ಬಂಧಿಸುವಲ್ಲಿ ಶುಕ್ರವಾರ ಯಶಸ್ವಿಯಾಗಿದ್ದಾರೆ.
ಮಂಗಳೂರು ಖಾಸಗಿ ಕಾಲೇಜಿನ ವಿದ್ಯಾರ್ಥಿ ಡೊನಾಲ್ಡ್ ಕುಞಿ ಮೋನ್ ( 20) ಹಾಗೂ ಸರಕಾರಿ ಕಾಲೇಜಿನ ವಿದ್ಯಾರ್ಥಿ ಶಾನ್ ಸೆಬಾಸ್ಟಿಯನ್ ( 20) ಬಂಧಿತ ಆರೋಪಿಗಳೆಂದು ಗುರುತಿಸಲಾಗಿದೆ.
ಆರೋಪಿಗಳು ಮಂಗಳೂರಿಗೆ ಬೈಕ್ ನಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ನಗರದ ಹೊರವಲಯದ ಅಣಂಗೂರಿ ಬಳಿ ದಾಳಿ ನಡೆಸಿ ಇಬ್ಬರನ್ನು ಬಂಧಿಸಿದ್ದು, ಈ ವೇಳೆ ಮತ್ತೋರ್ವ ಆರೋಪಿ ಪರಾರಿಯಾಗಿದ್ದಾನೆ. ಬಂಧಿತರಿಂದ ಸುಮಾರು 1.7 ಕಿ.ಲೋ. ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

