accident

ಹುಬ್ಬಳ್ಳಿ: ಸರಕಾರಿ ಬಸ್ ಹಾಗೂ ಟ್ಯಾಂಕರ್ ನಡುವೆ ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ 20 ಕ್ಕೂ ಅಧಿಕ ಮಂದಿಗೆ ಸಣ್ಣ ಪುಟ್ಟ ಗಾಯವಾಗಿದ್ದು, ನಾಲ್ವರು ಗಂಭೀರ ಗಾಯಗೊಂಡಿರುವ ಘಟನೆ ನಗರದ ಹೊರವಲಯ ತಾರಿಹಾಳ ಬಳಿ ಶುಕ್ರವಾರ ನಡೆದಿದೆ.

ಬೆಳಗಾವಿಯಿಂದ ಹುಬ್ಬಳ್ಳಿ ಕಡೆ ಬರುತ್ತಿದ್ದ ಸರಕಾರಿ ಬಸ್ ಹಾಗೂ ಟ್ಯಾಂಕರ್ ವಾಹನ ಮುಖಾಮುಖಿ ಢಿಕ್ಕಿ ಹೊಡೆದಿದ್ದು, ಪರಿಣಾಮ ನಾಲ್ಕು ಜನರಿಗೆ ಗಂಭೀರ ಗಾಯವಾಗಿದೆ. ಅಲ್ಲದೆ, 20ಕ್ಕೂ ಹೆಚ್ಚು ಜನ ಸಣ್ಣಪುಟ್ಟ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಗಾಯಾಳುಗಳನ್ನು ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನೆಯಲ್ಲಿ ಎರಡೂ ವಾಹನಗಳು ಜಖಂಗೊಂಡಿದೆ.

ಇನ್ನೂ ಘಟನೆಯಿಂದ ಒಂದು ಗಂಟೆಗೂ ಹೆಚ್ಚು ಕಾಲ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 4ರ ಸಂಚಾರ ಅಸ್ತವ್ಯಸ್ತಗೊಂಡಿತ್ತು.

ಈ ಬಗ್ಗೆ ಹುಬ್ಬಳ್ಳಿ ಗ್ರಾಮೀಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

By Suddi9

Leave a Reply

Your email address will not be published. Required fields are marked *