85855665

ತಿರುವನಂತಪುರಂ: ಆರೆಸ್ಸೆಸ್ ಕಾರ್ಯಕರ್ತನೋರ್ವನನ್ನು ದುಷ್ಕರ್ಮಿಗಳ ತಂಡವೊಂದು ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಹತ್ಯೆ ಮಾಡಿರುವ ಘಟನೆ ಕೇರಳದ ಕಣ್ಣೂರಿನಲ್ಲಿ ಶುಕ್ರವಾರ ನಡೆದಿದೆ.

ಶ್ಯಾಮ್ ಪ್ರಸಾದ್ ಹತ್ಯೆಯಾದ ಆರೆಸ್ಸೆಸ್ ಕಾರ್ಯಕರ್ತ ಎಂದು ಗುರುತಿಸಲಾಗಿದೆ.

ಮಾರಕಾಸ್ತ್ರಗಳೊಂದಿಗೆ ಕಾರಿನಲ್ಲಿ ಬಂದ ದುಷ್ಕರ್ಮಿಗಳ ತಂಡವೊಂದು ಪ್ರಸಾದ್ ಮೇಲೆ ದಾಳಿ ನಡೆಸಲು ಮುಂದಾದಾಗ ಪ್ರಸಾದ್ ಸ್ಥಳೀಯ ಮನೆಯೊಂದಕ್ಕೆ ನುಗ್ಗಿದ್ದಾರೆ. ಈ ವೇಳೆ ದುಷ್ಕರ್ಮಿಗಳು ಪ್ರಸಾದ್ ರನ್ನು ಮನೆಯಿಂದ ಹೊರಗೆಳೆದು ತಂದು ಮನಸೋ ಇಚ್ಛೆಯಿಂದ ಕೊಚ್ಚಿ ಕೊಲೆಗೈದಿದ್ದಾರೆ ಎಂದು ತಿಳಿದು ಬಂದಿದೆ.

 

 

By suddi9

Leave a Reply

Your email address will not be published. Required fields are marked *