ಜೈಪುರ: ಟ್ಯಾಂಕರೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರದಲ್ಲಿದ್ದ ವಿದ್ಯಾರ್ಥಿನಿಯೋರ್ವಳು ಸ್ಥಳದಲ್ಲಿಯೇ ಮೃತಪಟ್ಟಿದ್ದು, ಆಕೆಯ ಸಹೋದರಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಜಸ್ಥಾನದ ಜೋಧ್ಪುರನಲ್ಲಿ ಶನಿವಾರ ನಡೆದಿದೆ.
ಮೃತ ವಿದ್ಯಾರ್ಥಿಯನ್ನು ಮೀನಾ ಪುರಿ (20) ಎಂದು ಗುರುತಿಸಲಾಗಿದೆ.
ಮೀನಾ ಆಕೆಯ ಸಹೋದರಿಯ ಜತೆ ದ್ವಿಚಕ್ರವಾಹನದಲ್ಲಿ ಜಲೋರಿ ಗೇಟ್‍ನಿಂದ ಪುಸ್ತಕ ತೆಗೆದುಕೊಂಡು ಹಿಂದಿರುಗುತ್ತಿದ್ದ ಸಂದರ್ಭದಲ್ಲಿ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ.

