ಮಡಂತ್ಯಾರು: ಲಾರಿ ಹಾಗೂ ಕಾರಿನ ನಡುವೆ ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮಗು ಸೇರಿದಂತೆ ನಾಲ್ವರು ಗಂಭೀರ ಗಾಯಗೊಂಡ ಘಟನೆ ಇಲ್ಲಿನ ಆಶೀರ್ವಾದ್ ಸಭಾಂಗಣದ ಎದುರು ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ಸಂಜೆ ನಡೆದಿದೆ.
ಈ ಅಪಘಾತದಲ್ಲಿ ಗಾಯಗೊಂಡ ಗಾಯಾಳುಗಳನ್ನು ಖಾಸಗಿ ಆಸ್ಪತ್ರಗೆ ದಾಖಲಿಸಲಾಗಿದ್ದು, ಮೂಲತಃ ಮಂಗಳೂರಿನ ನಿವಾಸಿಗಳೆಂದು ತಿಳಿದು ಬಂದಿದೆ.
ಇನ್ನೂ ಗಾಯಾಳುಗಳ ಮಾಹಿತಿ ಇನ್ನಷ್ಟೇ ಲಭಿಸಬೇಕಾಗಿದೆ.
ಸುದ್ದಿ ತಿಳಿದ ಪುಂಜಲಕಟ್ಟೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪ್ರಕರಣ ದಾಖಲಿಸಿದ್ದಾರೆ.

