45241

ಉಳಾಯಿಬೆಟ್ಟು: ಉಳಾಯಿಬೆಟ್ಟು ಶಾಲಾಭಿವೃದ್ಧಿ ಸಮಿತಿ, ಹಳೆ ವಿದ್ಯಾರ್ಥಿಗಳ ಸಂಘ, ಲಯನ್ಸ್ ಕ್ಲಬ್ ಕಾವೂರು, ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ ಹಾಗೂ ಇತರೆ ಸ್ಥಳೀಯ ಸಂಘ-ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಮಂಗಳೂರು ಕೆಎಂಸಿ ಆಸ್ಪತ್ರೆ, ವೆನ್ಲಾಕ್ ಆಸ್ಪತ್ರೆ ಹಾಗೂ ಯೇನಪೋಯ ಮೆಡಿಕಲ್ ಕಾಲೇಜು ದೇರಳಕಟ್ಟೆ ಸಹಯೋಗದಿಂದ ‘ಸರಕಾರಿ ಶಾಲೆ ಉಳಿಸಿ’ ಅಭಿಯಾನದ ಅಂಗವಾಗಿ ಜ.21ರಂದು  ಬೃಹತ್ ರಕ್ತದಾನ ಶಿಬಿರ, ಉಚಿತ ಆರೋಗ್ಯ ತಪಾಸಣೆ, ಆಂಬುಲೆನ್ಸ್ ಸೇವೆ ಮತ್ತು ಟೈಲರಿಂಗ್ ತರಬೇತಿ ಉದ್ಘಾಟನೆ ಹಾಗೂ ಶಾಲಾ ಮಕ್ಕಳ ಪ್ರತಿಭಾ ಪುರಸ್ಕಾರ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ  ಇಲ್ಲಿನ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಆಯೋಜಿಸಲಾಗಿದೆ.

ಅಂದು ಬೆಳಗ್ಗೆ  9ಕ್ಕೆ ನಡೆಯಲಿರುವ ಸಭಾ ಕಾರ್ಯಕ್ರಮವನ್ನು ಲಯನ್ಸ್ ಕ್ಲಬ್ ನ ದಯಾನಂದ್ ಶೆಟ್ಟಿ ಕಡಂಬಿಲ ಉದ್ಘಾಟಿಸಲಿದ್ದು, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಅಬ್ದುಲ್ ಕುಂಞಿ ಅಧ್ಯಕ್ಷತೆ ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ತಾ.ಪಂ. ಸದಸ್ಯ ಅಪ್ಸತ್, ಮಂಗಳೂರು ಶ್ರೀ.ಕ್ಷೇ.ಧ.ಗ್ರಾ.ಅ.ಯೋಜನಾಧಿಕಾರಿ ಉಮರಬ್ಬ, ಉಳಾಯಿಬೆಟ್ಟು ಸಾಲೆ ಜುಮಾ ಮಸೀದಿ ಅಧ್ಯಕ್ಷ ಇಸ್ಮಾಯೀಲ್, ಎಂಎಸ್ ಡಬ್ಲ್ಯುಯೆನಪೋಯ ಆಸ್ಪತ್ರೆ ದೇರಳಕಟ್ಟೆ ಅಬ್ದುಲ್ ರಝಾಕ್, ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ ಅಡ್ಮಿನ್ ಶೇಖ್ ಫಯಾಝ್ ಅಲಿ ಬೈಂದೂರು, ಹಳೆ ವಿಧ್ಯಾರ್ಥಿ ಸಂಘ ಉಪಾಧ್ಯಕ್ಷ ರಾಜೀವ್ ಶೆಟ್ಟಿ ಸಲ್ಲಾಜೆ, ಹಳೇ ವಿಧ್ಯಾರ್ಥಿ ಸಂಘ ಪ್ರಧಾನ ಕಾರ್ಯದರ್ಶಿ ಸುರೇಶ್ ಆರಂತಗೋಡಿ ಮತ್ತಿತರ ಗಣ್ಯರು ಭಾಗವಹಿಸಲಿದ್ದಾರೆ.

ಇದೇ ವೇಳೆ ನಡೆಯುವ ಧ್ವಜಾರೋಹಣ ಕಾರ್ಯಕ್ರಮವನ್ನು  ಉಳಾಯಿಬೆಟ್ಟು ಗ್ರಾ.ಪಂ ಅಧ್ಯಕ್ಷ ವಸಂತ್ ಕುಮಾರ್ ನೆರವೇರಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

By suddi9

Leave a Reply

Your email address will not be published. Required fields are marked *