4885

ಮಂಗಳೂರು: ಜಿಲ್ಲಾಡಳಿತದ ವತಿಯಿಂದ ಮಂಗಳೂರು ಬೃಹತ್ ಉದ್ಯೋಗ ಮೇಳ ಫೆ.16 ರಂದು ಮಂಗಳೂರು ವಿಶ್ವ ವಿದ್ಯಾನಿಲಯದ ಆವರಣದಲ್ಲಿ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಡಾ.ಸಸಿಕಾಂತ್ ಸೆಂಥಿಲ್ ಮಾಹಿತಿ ನೀಡಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲಾ ಉಸ್ತುವಾರಿ ಸಚಿವರು ಈಗಾಗಲೇ ವ್ಯವಸ್ಥಿತವಾಗಿ ಉದ್ಯೋಗ ಮೇಳದ ಆಯೋಜನೆಯನ್ನು ನಡೆಸಲು ಸೂಚಿಸಿದ್ದು ಅದರ ಪ್ರಕಾರ ಉತ್ತಮವಾದ ರೀತಿಯಲ್ಲಿ ಉದ್ಯೋಗ ಮೇಳವನ್ನು ನಡೆಸಿ ನಿರುದ್ಯೋಗಿಗಳಿಗೆ ಉದ್ಯೋಗವನ್ನು ಪಡೆಯಲು ಸಹಕರಿಸಬೇಕು ಎಂದು ಹೇಳಿದ್ದಾರೆ.

ಉದ್ಯೋಗ ಮೇಳದ ವೆಬ್‍ಸೈಟ್‍ನ್ನು ರಚಿಸಿ ಅದರ ಮೂಲಕ ಉದ್ಯೋಗ ಮೇಳದ ಮಾಹಿತಿ ಹಾಗೂ ನೋಂದಣಿ ಮತ್ತು ಮೇಳದಲ್ಲಿ ಭಾಗವಹಿಸುವ ಕಂಪೆನಿಗಳ ಮಾಹಿತಿಯನ್ನು ನೀಡಲಾಗುವುದು ಎಂದು ಅವರು ಹೇಳಿದರು. ಅಲ್ಲದೇ ಈ ಸಂಬಂಧ ಮಲ್ಲಿಕಟ್ಟೆಯಲ್ಲಿರುವ ಇನ್‍ಕ್ಯುಬೇಶನ್ ಸೆಂಟರ್‍ನಲ್ಲಿ ಕಂಟ್ರೋಲ್ ರೂಂ ರಚಿಸಿ ಅದರ ಮೂಲಕ ಮಾಹಿತಿಯನ್ನು ಪಡೆಯಲು ಅವಕಾಶ ಕಲ್ಪಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಉದ್ಯೋಗಮೇಳವು ನಿರುದ್ಯೋಗಿಗಳಿಗೆ ಉತ್ತಮವಾದ ಜೀವನ ರೂಪಿಸಲು ಉದ್ಯೋಗವನ್ನು ಸೃಷ್ಟಿsಸಿ ಸೂಕ್ತ ಅಭ್ಯರ್ಥಿಗಳಿಗೆ ಉದ್ಯೋಗ ದೊರೆಯುವಂತೆ ಮಾಡಬೇಕು ಎಂದು ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಅಲ್ಲದೇ ಇಲ್ಲಿ ಭಾಗವಹಿಸುವ ಕಂಪೆನಿಗಳ ಜೊತೆಗೆ ಮುಂಚಿತವಾಗಿ ಮಾತಾನಾಡಿ ಸೂಕ್ತವಾದ ಕಂಪೆನಿಗಳನ್ನು ಮಾತ್ರ ಆರಿಸಲಾಗುವುದು ಎಂದು ಅವರು ಹೇಳಿದ್ದಾರೆ.

ಮೇಳದ ಅಚ್ಚುಕಟ್ಟಾದ ಆಯೋಜನೆಗಾಗಿ ವಿವಿಧ ಸಮಿತಿಗಳನ್ನು ರಚಿಸಿ ಸ್ಥಳ ವೀಕ್ಷಣೆ, ಊಟೋಪಚಾರದ ವ್ಯವಸ್ಥೆ, ಹಾಗೂ ಕಾರ್ಯಕ್ರಮ ನಿರ್ವಹಣೆಗಾಗಿ ವಿಶೇಷವಾದ ತಂಡವನ್ನು ರಚಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಅಪಾರ ಜಿಲ್ಲಾಧಿಕಾರಿ ಕುಮಾರ್, ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಮುಹಮದ್ ನಝೀರ್, ಗೋಕುಲ್‍ದಾಸ್ ನಾಯ್ಕ್, ವಿವೇಕ್ ಆಳ್ವ, ಹರೀಶ್ ಶೆಟ್ಟಿ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

 

By Suddi9

Leave a Reply

Your email address will not be published. Required fields are marked *