ಮಂಗಳೂರು: ದ.ಕ. ಜಿಲ್ಲಾ ಎಸ್ಪಿಯಾಗಿದ್ದ ಸುಧೀರ್ ಕುಮಾರ್ ರೆಡ್ಡಿ ಅವರ ವರ್ಗಾವಣೆ ಹಿಂದೆ ಮುಖ್ಯಮಂತ್ರಿ ಕೈವಾಡವಿದ್ದರೆ ಅದನ್ನು ನಾನು ಖಂಡಿಸುತ್ತೇನೆ ಎಂದು ಜನಾರ್ದನ ಪೂಜಾರಿ ಕೆಂಡಾಮಂಡಲರಾಗಿದ್ದಾರೆ.
ಸೋಮವಾರ ನಗರದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ದ.ಕ. ಪೊಲೀಸ್ ವರಿಷ್ಠಾಧಿಕಾರಿಗಳನ್ನು ಪದೇ-ಪದೇ ವರ್ಗಾವಣೆ ಮಾಡುವುದು ಸರಿಯಲ್ಲ. ಸುಧೀರ್ ಕುಮಾರ್ ರೆಡ್ಡಿ ಅವರ ವರ್ಗಾವಣೆ ಹಿಂದೆ ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ಕೈವಾಡವಿದ್ದರೆ ಅದರ ಪರಿಣಾಮವನ್ನು ಅವರು ಅನುಭವಿಸುತ್ತಾರೆ ಎಂದು ಕಿಡಿಕಾರಿದರು.
ಕೆಲವೊಂದು ತಪ್ಪು ನಿರ್ಧಾರಗಳನ್ನು ಕೈಗೆತ್ತಿಕೊಳ್ಳುವ ಮುಖ್ಯಮಂತ್ರಿ, ಸಚಿವರನ್ನು ಕೇಳುವವರು ಯಾರು ಇಲ್ಲವೇ ಎಂದು ಪ್ರಶ್ನಿಸಿದರು.

