ತುಮಕೂರು: ಭಾರತರತ್ನ ಪುರಸ್ಕಾರಕ್ಕೆ ಶಿವಕುಮಾರ ಸ್ವಾಮೀಜಿ ಅವರ ಹೆಸರು ಬಹುತೇಕ ಖಚಿತವಾಗಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.
‘ಮಂಗಳವಾರ ದಿಲ್ಲಿಯಲ್ಲಿ ಗೃಹ ಸಚಿವ ರಾಜನಾಥ ಸಿಂಗ್ ಅವರ ಅಧ್ಯಕ್ಷತೆಯಲ್ಲಿ ನಡೆದ ಆಯ್ಕೆ ಸಮಿತಿಯ ಗೌಪ್ಯ ಸಭೆಯಲ್ಲಿ ಸಿದ್ಧಗಂಗಾ ಮಠಾಧೀಶ ಶಿವಕುಮಾರ ಸ್ವಾಮೀಜಿ ಅವರ ಹೆಸರು ಕೇಳಿಬಂದಿದ್ದು, ಈ ಬಾರೀ ಸ್ವಾಮೀಜಿಗೆ ಭಾರತ ರತ್ನ ಪ್ರಶಸ್ತಿ ನೀಡುವುದು ಬಹುತೇಕ ಖಚಿತವಾಗಿದೆ’ ಎಂದು ಅಧಿಕಾರಿಯೋರ್ವರು ಮಾಹಿತಿ ನೀಡಿದ್ದಾರೆ.
ಏ.1ಕ್ಕೆ 111ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವ ಸ್ವಾಮೀಜಿ ಅವರಿಗೆ ‘ಭಾರತ ರತ್ನ’ ಪುರಸ್ಕಾರ ನೀಡಬೇಕೆಂದು ಜೆಲ್ಲೆಯ ಜನತೆಯ ಆಗ್ರಹ ಕೇಳಿ ಬರುತ್ತಿದೆ.

