ಬೆಂಗಳೂರು: ಜ. 25 ರಂದು ಕರ್ನಾಟಕ ಬಂದ್ ಮತ್ತು ಫೆ. 4 ರಂದು ಬೆಂಗಳೂರು ಬಂದ್ ಕರೆ ನೀಡಿರುವುದು ರಾಜಕೀಯ ಪ್ರೇರಿತವಾಗಿದೆ ಎಂದು ವಿರೋಧ ಪಕ್ಷದ ನಾಯಕ ಜಗದೀಶ್ ಶೆಟ್ಟರ್ ಆರೋಪಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಮಿತ್ ಶಾ, ಪ್ರಧಾನಿ ಮೋದಿ ರಾಜ್ಯಕ್ಕೆ ಬಂದು ಸಮಾವೇಶ ಮಾಡುತ್ತಾರೆ ಎಂಬ ಭಯವಿದೆ. ಅದಕ್ಕಾಗಿ ಸಿಎಂ ಸಿದ್ದರಾಮಯ್ಯ ನೇರವಾಗಿ ಬಂದ್ ಗೆ ಬೆಂಬಲ ನೀಡಿದ್ದಾರೆ ಎಂದು ದೂರಿದರು.
ಮೊದಲು ಜ. 27 ರಂದು ರಾಜ್ಯ ಬಂದ್ ಕರೆ ನೀಡಲಾಗಿತ್ತು. ಆದರೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಮೈಸೂರಿಗೆ ಬರುತ್ತಿರುವ ಹಿನ್ನಲೆ ಬಂದ್ ಕರೆಯನ್ನು ಜ. 25 ಕ್ಕೆ ಮಾಡಿ ಎಂದು ಸಿಎಂ ಸಿದ್ದರಾಮಯ್ಯ ಅಧಿಕೃತ ಪ್ರಕಟಿಸಿದ್ದಾರೆ. ಫೆ. 4 ರಂದು ಪ್ರಧಾನಿ ಮೋದಿ ಬೆಂಗಳೂರಿಗೆ ಆಗಮಿಸುತ್ತಿರುವ ಹಿನ್ನಲೆ ಫೆ. 4 ರಂದು ಬೆಂಗಳೂರು ಬಂದ್ ಕರೆ ನೀಡಲಾಗಿದೆ.
ಬಂದ್ ಕರೆ ನೀಡುವಂತಿಲ್ಲ ಎಂದು ಸುಪ್ರೀಂಕೋರ್ಟ್ ಆದೇಶ ನೀಡಿದೆ. ಆದರು ಕಾನೂನು ಬಾಹಿರವಾಗಿ ಬಂದ್ ಕರೆ ನೀಡಲಾಗಿದ್ದು, ಸಿಎಂ ಸಿದ್ದರಾಮಯ್ಯ ಬಹಿರಂಗವಾಗಿ ಬೆಂಬಲ ನೀಡುವ ಮೂಲಕ ಸುಪ್ರೀಂ ಆದೇಶ ಉಲ್ಲಂಘಿಸಿದ್ದಾರೆ ಎಂದು ಕಿಡಿಕಾರಿದರು.

