ಬೆಂಗಳೂರು: ಕಳಸಾ-ಬಂಡೂರಿ, ಮಹದಾಯಿ ಸಮಸ್ಯೆಗೆ ಪರಿಹಾರ ಕೋರಿ ಕನ್ನಡಪರ ಸಂಘಟನೆಗಳು ಜ.25ರಂದು ಕರ್ನಾಟಕ ಬಂದ್ ಕರೆ ನೀಡಿರುವ ಹಿನ್ನೆಲೆಯಲ್ಲಿ ಭದ್ರತೆಗಾಗಿ ರಾಜ್ಯಾದ್ಯಂತ ಸುಮಾರು 70 ಸಾವಿರ ಪೊಲೀಸರನ್ನು ನಿಯೋಜಿಸಲಾಗಿದೆ.
ಮಹದಾಯಿ ನೀರಿನ ಫಲಾನುಭವಿ ಜಿಲ್ಲೆಗಳಾದ ಗದಗ, ಹಾವೇರಿ, ಧಾರವಾಡ, ಬೆಳಗಾವಿ ಸೇರಿ ರಾಜ್ಯದ ಎಲ್ಲೆಡೆ ಬಿಗಿ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ ಎಂದು ರಾಜ್ಯದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಕಮಲ್ ಪಂಥ್ ತಿಳಿಸಿದ್ದಾರೆ.

