Vatal-Nagaraj-1024x562

ಬೆಂಗಳೂರು:  ಕರ್ನಾಟಕ ಬಂದ್ ಗೆ ಜನರಿಂದ ಉತ್ತಮ ಬೆಂಬಲ ವ್ಯಕ್ತವಾಗಿದ್ದು, ರಾಜ್ಯದ ಎಲ್ಲಾ ಜಿಲ್ಲೆಗಳ ಜನತೆಗೂ ನಾನು ಅಭಿನಂದನೆ ಸಲ್ಲಿಸುತ್ತೇನೆ ಎಂದು ಕನ್ನಡ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ಹೇಳಿದ್ದಾರೆ.

ಗುರುವಾರ ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣಕ್ಕೆ ಭೇಟಿ ನೀಡಿ ಬಳಿಕ  ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹದಾಯಿಗಾಗಿ ಕರೆ ನೀಡಿದ್ದ ಕರ್ನಾಟಕ ಬಂದ್ ಗೆ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಈ ಸಂದರ್ಭದಲ್ಲಿ ನಾಡಿನ ಎಲ್ಲಾ ಜನತೆಗೆ ನಾನು ಧನ್ಯವಾದ ಸಲ್ಲಿಸುತ್ತೇನೆ ಎಂದು ತಿಳಿಸಿದರು.

ಕನ್ನಡ ಪರ ಸಂಘಟನೆಗಳ ನಡುವೆ ಒಡಕು ಇದೆ ಎಂಬುದು ಸತ್ಯಕ್ಕೆ ದೂರವಾದದ್ದು, ಅಂತಹ ಸ್ಥಿತಿ ನಮ್ಮಲ್ಲಿ ಮೂಡಿಲ್ಲ. ಎಲ್ಲರೂ ಒಟ್ಟಾಗಿದ್ದೇವೆ ಎಂದು ಸ್ಪಷ್ಟಪಡಿಸಿದ ಅವರು, ಬೆಂಗಳೂರು ಸೇರಿ ಬಹುತೇಕ ಎಲ್ಲಾ ಜಲ್ಲೆಗಳಲ್ಲಿ ಬಂದ್ ಯಶಸ್ವಿಯಾಗಲಿದ್ದು, ಶಾಂತಿಯುತ ಬಂದ್ ಆಚರಿಸಿ ಎಂದು ಮನವಿ ಮಾಡಿದರು.

By suddi9

Leave a Reply

Your email address will not be published. Required fields are marked *