DSC_3704

ಮೂಡಬಿದಿರೆ: ವಿದ್ಯಾರ್ಥಿಯೋರ್ವಳು  ಕಾಲೇಜಿನ 5ನೇ ಮಹಡಿಯಿಂದ  ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಲ್ಲಿನ  ಆಳ್ವಾಸ್ ಕಾಲೇಜಿನಲ್ಲಿ ಗುರುವಾರ ಮಧ್ಯಾಹ್ನ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯನ್ನು ಚಿತ್ರದುರ್ಗದ ಮೂಲದ ರಚನಾ  ಎಂದು ಗುರುತಿಸಲಾಗಿದೆ.

ಆಳ್ವಾಸ್ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ ರಚನಾ ಆತ್ಮಹತ್ಯೆಗೂ ಮುನ್ನ ಡೆತ್ ನೋಟ್ ಬರೆದಿಟ್ಟಿದ್ದು, “ತನ್ನ ಆತ್ಮಹತ್ಯೆಗೆ ಕಡಿಮೆ ಅಂಕ ಪಡೆದಿರುವುದು ಕಾರಣ” ಎಂದು ಡೆತ್ ನೋಟ್ ನಲ್ಲಿ ಬರೆದುಕೊಂಡಿದ್ದಾಳೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಈ ಬಗ್ಗೆ ಮೂಡಬಿದರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

By suddi9

Leave a Reply

Your email address will not be published. Required fields are marked *