ಖಾನಾಪೂರ: ಬುಲೇರೊ ಹಾಗೂ ದ್ವಿಚಕ್ರ ವಾಹನ ನಡುವೆ ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಗುರುವಾರ ಬೀಡಿ ಸಮೀಪದ ಗೋಲೆಹಳ್ಳಿ ಬಳಿ ನಡೆದಿದೆ.
ಮೃತರನ್ನು ಶಂಕರ, ರುದ್ರಗೌಡ ಎಂದು ಗುರುತಿಸಲಾಗಿದೆ.
ಬುಲೇರೊ ವಾಹನ ಬೀಡಿಯಿಂದ ಅಳ್ನಾವರ ಕಡೆಗೆ ಬರುತ್ತಿದ್ದ ವೇಳೆ ಈ ಅವಘಡ ಸಂಭವಿಸಿದ್ದು, ಪರಿಣಾಮ ಒಬ್ಬ ಸ್ಥಳದಲ್ಲಿಯೇ ಮೃತಪಟ್ಟರೆ, ಮತ್ತೋರ್ವರು ಆಸ್ಪತ್ರೆ ಸಾಗಿಸುವಾಗ ಮೃತಪಟ್ಟಿದ್ದಾರೆ.
ಈ ಸಂಬಂಧ ನಂದಗಡ ಪೂಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

