ಹುಬ್ಬಳ್ಳಿ: ದುಷ್ಕರ್ಮಿಗಳ ತಂಡವೊಂದು ವ್ಯಕ್ತಿಯೋರ್ವನನ್ನು ತಲ್ವಾರ್ ನಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಇಲ್ಲಿನ ವಸಂತ ನಗರದಲ್ಲಿ ಶುಕ್ರವಾರ ನಡೆದಿದೆ.
ಕೊಲೆಯಾದ ಮೃತರನ್ನು ಕುಮಾರ್ ಪಿಳ್ಳೈ ಎಂದು ಗುರುತಿಸಲಾಗಿದೆ.
ಕಳೆದ ವರ್ಷ ಕುಮಾರ್ ಪಿಳ್ಳೈ ಅವರ ಪುತ್ರ ವಿನಯ್ ಪಿಳ್ಳೈ ಮೇಲೆ ಲಾರಿ ಹರಿಸಿ ಕೊಲೆ ಮಾಡಿದ್ದು, ಬಳಿಕ ಇದನ್ನು ಅಪಘಾತದಿಂದ ಆದ ಕೊಲೆ ಎಂದು ಸಿಸಿಟಿವಿಯಲ್ಲಿ ಕೃತ್ಯ ಬಯಲಾಗಿದೆ. ಇದೀಗ ತಂದೆ ಕುಮಾರ್ ಪಿಳ್ಳೈರನ್ನು ಹಳೇ ವೈಷಮ್ಯದ ಹಿನ್ನೆಲೆಯಲ್ಲಿ ಕೊಲೆ ಮಾಡಿರುವ ಬಗ್ಗೆ ಪಲೀಸರು ಶಂಕಿಸಿದ್ದಾರೆ.
ಈ ಬಗ್ಗೆ ಕೇಶ್ವಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
