ಬಂಟ್ವಾಳ:ತಾಲ್ಲೂಕಿನ ಸಜಿಪಮೂಡ ಬ್ರಹ್ಮಶ್ರೀ ನಾರಾಯಣ ಗುರುಮಂದಿರಕ್ಕೆ ಕಳೆದ ವರ್ಷ ಭೇಟಿ ನೀಡಿದ್ದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಭಾವಚಿತ್ರದ ಬ್ಯಾನರ್‍ನಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಅವರ ಭಾವಚಿತ್ರವನ್ನು ನಾನು ವೈಯಕ್ತಿಕವಾಗಿ ಅಳವಡಿಸಿರುವುದಾಗಿ ಗುರು ಮಂದಿರ ಅಧ್ಯಕ್ಷ ಕೆ.ಸಂಜೀವ ಪೂಜಾರಿ ಬೊಳ್ಳಾಯಿ ಹೇಳಿದ್ದಾರೆ.
ಆದರೆ ಬಿಜೆಪಿ ಜಿಲ್ಲಾ ವಕ್ತಾರ ಕೆ.ಹರಿಕೃಷ್ಣ ಬಂಟ್ವಾಳ್ ಅವರು ಕ್ಷುಲ್ಲಕ ರಾಜಕೀಯ ಕಾರಣಕ್ಕಾಗಿ ಅನಗತ್ಯ ಹೇಳಿಕೆ ನೀಡುತ್ತಿದ್ದಾರೆ ಎಂದು ಆರೋಪಿಸಿ ಅವರು ನೀಡಿದ ಲಿಖಿತ ಹೇಳಿಕೆಯಲ್ಲಿ ಸ್ಪಷ್ಟಪಡಿಸಿದ್ದಾರೆ.
