ಬೀದರ್: ಪ್ರಿಯಕರನೋರ್ವ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಮಾಡಿ ಬಳಿಕ ಕತ್ತು ಕುಯ್ದು ಕೊಲೆ ಮಾಡಿದ ದಾರುಣ ಘಟನೆ ಜಿಲ್ಲೆಯ ಭಾಲ್ಕಿ ತಾಲೂಕಿನ ಖಾನಾಪುರ ಅರಣ್ಯ ಪ್ರದೇಶದಲ್ಲಿ ನಡೆದಿದೆ.
ಭಾಲ್ಕಿ ತಾಲೂಕಿ ಕೋಸಮ್ ಗ್ರಾಮದ ಪೂಜಾ(20) ಮೃತಪಟ್ಟ ವಿದ್ಯಾರ್ಥಿನಿ ಎಂದು ಗುರುತಿಸಲಾಗಿದೆ.
ಪ್ರಕರಣ ಸಂಬಂಧಿಸಿದಂತೆ ಪ್ರಮುಖ ಆರೋಪಿ ಸಂಶುದ್ದೀನ್‍ನ್ನು(24) ಪೊಲೀಸರು ಬಂಧಿಸಿದ್ದಾರೆ.
ಪೂಜಾ ಇಲ್ಲಿನ ಅಕ್ಕಮಹಾದೇವಿ ಕಾಲೇಜಿನಲ್ಲಿ ಪದವಿ ವ್ಯಾಸಂಗ ಮಾಡುತ್ತಿದ್ದ ವೇಳೆ ಸಂಶುದ್ದೀನ್ ಪ್ರೀತಿಸುವಂತೆ ಒತ್ತಾಯಿಸುತ್ತಿದ್ದ. ಇದಕ್ಕೆ ನಿರಾಕರಿಸಿದ್ದ ಪೂಜಾಳನ್ನು ಒತ್ತಾಯಪೂರ್ವಕವಾಗಿ ಕರೆದೊಯ್ದು ಅತ್ಯಾಚಾರ ಮಾಡಿ ಕೊಲೆ ಮಾಡಿದ್ದಾನೆ ಎನ್ನಲಾಗಿದೆ.
ಈ ಬಗ್ಗೆ ದನ್ನೂರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

