ಕೋಲಾರ: ಚಾಲಕನ ನಿಯಂತ್ರಣ ತಪ್ಪಿ ಬೈಕ್ ಲಾರಿಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್‍ನಲ್ಲಿದ್ದ ಮಗು ಸೇರಿ ಮೂವರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಆಂಧ್ರ ಗಡಿ ಚಿತ್ತೂರು ಜಿಲ್ಲೆಯ ಶಾಂತಿಪುರಂ ಬಳಿ ರವಿವಾರ ನಡೆದಿದೆ.
ಮೃತರನ್ನು ಗುಡಪಲ್ಲಿ ಬಳಿಯ ಅಗರಂ ಮೂಲದ ನಾರಾಯಣಮ್ಮ(40), ಮಮತ(24), ಯಶ್ವಂತಿ (2) ಎಂದು ಗುರುತಿಸಲಾಗಿದೆ. ಇನ್ನೂ ಘಟನೆಯಲ್ಲಿ ರಾಜಪ್ಪ ಗಂಭೀರ ಗಾಯಗೊಂಡಿದ್ದು, ಅವರನ್ನು ಸಮೀಪದ ಕುಪ್ಪಂ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಒಂದೇ ಬೈಕಿನಲ್ಲಿ ರಾಜಪ್ಪ ಸೇರಿ ನಾಲ್ವರು ಬೈಕಿನಲ್ಲಿ ಶಾಂತಿಪುರಂನಿಂದ ಕುಪ್ಪಂ ಹೋಗುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಲಾರಿಗೆ ಢಿಕ್ಕಿ ಹೊಡೆದಿದ್ದು, ಪರಿಣಾಮ ಮಗು ಸೇರಿ ಇಬ್ಬರು ಮಹಿಳೆಯರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಅಲ್ಲದೆ, ಚಾಲಕ ರಾಜಪ್ಪ ಗಂಭೀರ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಈ ಬಗ್ಗೆ ಸಂಬಂಧ ರಾಳ್ಳ ಬೂದಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

