ಚಾಮರಾಜನಗರ: ಚಾಲಕನ ನಿಯಂತ್ರಣ ತಪ್ಪಿದ ಬಸ್ಸೊಂದು ಸೇತುವೆ ತಡೆಗೋಡೆಗೆ ಢಿಕ್ಕಿ ಹೊಡೆದ ಪರಿಣಾಮ ಕಂಡೆಕ್ಟರ್ ಮೃತಪಟ್ಟರೆ, ಹಲವರು ಬಂಭೀರ ಗಾಯಗೊಂಡಿರುವ ಘಟನೆ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಭೀಮನಬೀಡು ಬಳಿ ಸೋಮವಾರ ನಡೆದಿದೆ.
ಇಂದು ಬೆಳಗ್ಗೆ ಮೈಸೂರಿನಿಂದ ಕ್ಯಾಲಿಕೇಟಗೆ ಹೋಗುತ್ತಿದ್ದ ಕೇರಳ ಸಾರಿಗೆ ಬಸ್ ಭೀಮನಬೀಡು ತಲುಪುತ್ತಿದ್ದ ಚಾಲಕ ನಿದ್ದಗೆ ಜಾರಿದ್ದರಿಂದ ಸೇತುವೆ ತಡೆಗೋಡೆಗೆ ಢಿಕ್ಕಿ ಹೊಡೆದಿದ್ದು, ಪರಿಣಾಮ ಕಂಡೆಕ್ಟರ್ ಸ್ಥಳದಲ್ಲೇ ಮೃತಪಟ್ಟರೆ 30 ಮಂದಿ ಪ್ರಯಾಣಿಕರಲ್ಲಿ ಹಲವರು ಗಂಭೀರ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಇನ್ನೂ ಘಟನೆಯಲ್ಲಿ ತೀವ್ರ ಸ್ವರೂಪದ ಗಾಯಗೊಂಡ ಪ್ರಯಾಣಿಕರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಬಗ್ಗೆ ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

