Siddaramaiah-11-600

ಬೆಂಗಳೂರು: ನಿವೃತ್ತ ಅಧಿಕಾರಿ ಎಮ್.ಆರ್. ಶ್ರೀನಿವಾಸ್ ಮೂರ್ತಿ ನೇತೃತ್ವದ ಸಮಿತಿ ಆರನೇ ವೇತನ ಆಯೋಗದ ಶಿಫಾರಸುಗಳ ವರದಿಯನ್ನು  ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿದೆ.

ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ  ಸರ್ಕಾರಿ ನೌಕರರ ಶೇ.30 ರಷ್ಟು ವೇತನ ಹೆಚ್ಚಳಕ್ಕೆ  ಆರನೇ ವೇತನ ಆಯೋಗದ ಶಿಫಾರಸುಗಳ ವರದಿಯನ್ನು ಬುಧವಾರ ಸಲ್ಲಿಸಲಾಯಿತು.

2017ರ ಜೂನ್ ನಲ್ಲಿ ನಿವೃತ್ತ ಅಧಿಕಾರಿ ಎಮ್.ಆರ್. ಶ್ರೀನಿವಾಸ್ ಮೂರ್ತಿ ನೇತೃತ್ವದಲ್ಲಿ ಆರನೇ ವೇತನ ಆಯೋಗವನ್ನು ರಚಿಸಲಾಗಿತ್ತು.

ಸರ್ಕಾರಿ ನೌಕರರ ವೇತನ ಪರಿಷ್ಕರಣೆಯ ಬಗ್ಗೆ ಸಲ್ಲಿಸಿದ ವೇತನ ಆಯೋಗದ ಶಿಫಾರಸುಗಳ ಬಗ್ಗೆ ಮುಂದಿನ ವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

 

.

By suddi9

Leave a Reply

Your email address will not be published. Required fields are marked *