ಚಿಕ್ಕೋಡಿ: ಪತಿ-ಪತ್ನಿಯ ನಡುವೆ ಕೌಟುಂಬಿಕ ಕಲಹ ನಡೆಯುತ್ತಿದ್ದ ವೇಳೆ ಬಿಡಿಸಲು ಬಂದ ವ್ಯಕ್ತಿಗೆ ಚೂರಿಯಿಂದ ಇರಿದು ಕೊಲೆ ಮಾಡಿರುವ ಘಟನೆ ನಿಪ್ಪಾಣಿ ಪಟ್ಟಣದಲ್ಲಿ ಬುಧವಾರ ನಡೆದಿದೆ.
ರಂಜಾನ್ ಮುಝಾವರ್ ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ.
ಹೈದರಾಲಿ ಕ್ಷುಲ್ಲಕ ಕಾರಣಕ್ಕೆ ಪತ್ನಿ ಜತೆ ಜಗಳ ಮಾಡುತ್ತಿದ್ದು, ಇಬ್ಬರಿಗೂ ಸಮಾಧಾನ ಹೇಳಲು ಬಂದ ರಂಜಾನ್ ನಿಗೆ ಹೈದರಾಲಿ ಚೂರಿಯಿಂದ ಇರಿದು ಕೊಲೆ ಮಾಡಿದ್ದಾನೆ ಎಂದು ತಿಳಿದು ಬಂದಿದೆ.
ಘಟನೆ ಬಳಿಕ ಹೈದರಾಲಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸತ್ತಿದ್ದಾರೆ.
ಈ ಬಗ್ಗೆ ನಿಪ್ಪಾಣಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

