ಬೆಂಗಳೂರು: ಬಿಜೆಪಿ ತೊರೆದಿರುವ ಮಾಜಿ ಶಾಸಕ ಆನಂದ್ ಸಿಂಗ್ ಅವರು ಬುಧವಾರ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಸಮ್ಮುಖದಲ್ಲಿ ಆನಂದ್ ಸಿಂಗ್ ಅವರು ತಮ್ಮ ಬೆಂಬಲಿಗರೊಂದಿಗೆ ಕಾಂಗ್ರೆಸ್ ಸೇರ್ಪಡೆಗೊಂಡರು. ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಆನಂದ ಸಿಂಗ್ ಅವರನ್ನು ಹೂಗುಚ್ಚ ನೀಡಿ ಅಭಿನಂದಿಸಿದರು.
ಕೆಪಿಸಿಸಿ ಕಾರ್ಯಾಧ್ಯಕ್ಷರಾದ ದಿನೇಶ್ ಗುಂಡೂರಾವ್ ಮತ್ತು ಎಸ್.ಆರ್.ಪಾಟೀಲ್, ಸಚಿವ ಡಿ.ಕೆ.ಶಿವಕುಮಾರ್, ಸಂತೋಷ ಲಾಡ್ ಇದ್ದರು.
ಬಿಜೆಪಿಯಲ್ಲಿನ ಇತ್ತೀಚಿನ ಬೆಳವಣಿಗೆಗಳಿಂದ ಬೇಸತ್ತು ಹೊಸಪೇಠ ತಾಲೂಕಿನ ವಿಜಯನಗರ ಕ್ಷೇತ್ರದ ಶಾಸಕ ಆನಂದ್ ಸಿಂಗ್ ಜ.27ರಂದು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

