610796-raod-accident-1

ಕಲಬುರಗಿ: ಬೈಕ್ ಗೆ ಟೆಂಪೊ ಢಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಕಲಬುರಗಿ ಸಮೀಪದ ನಾವದಗಿ ಗ್ರಾಮದ ಬಳಿ ರವಿವಾರ ತಡರಾತ್ರಿ ನಡೆದಿದೆ.

ಮೃತರನ್ನು ಚಿಂಚೋಳಿ ತಾಲೂಕಿನ ಬುಯ್ಯಾದ್ ಗ್ರಾಮದ ನಿವಾಸಿಗಳಾದ ಶರಣು(25), ಈರಪ್ಪ(26), ರವಿಕುಮಾರ್ ಕುಲಕರ್ಣಿ(28)  ಎಂದು ಗುರುತಿಸಲಾಗಿದೆ.

ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಟೆಂಪೊ ಢಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ.

ಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ ಸ್ಥಳೀಯ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ.

 

By Suddi9

Leave a Reply

Your email address will not be published. Required fields are marked *