6465

ಮುಲ್ಕಿ: ಬೈಕ್ ಗೆ ಬಸ್ ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಇಲ್ಲಿನ ಕೊಕ್ಕರ್ ಕಲ್ ಪೆಟ್ರೋಲ್ ಪಂಪು ಬಳಿ ಸೋಮವಾರ ರಾತ್ರಿ ನಡೆದಿದೆ.

ಮೃತರನ್ನು ಕಾರ್ನಾಡು ಸಮೀಪದ ಸುಖಾನಂದ ನಗರ ನಿವಾಸಿ ಮಧುಸೂಧನ್ ಕಾಮತ್ (61) ಎಂದು ಗುರುತಿಸಲಾಗಿದೆ.

 ಮಧುಸೂಧನ್ ಅವರು ಸೋಮವಾರ ರಾತ್ರಿ 8 ಗಂಟೆ ಸುಮಾರಿಗೆ ತಮ್ಮ ಸ್ಕೂಟರ್ ನಲ್ಲಿ ಮನೆಗೆ ಹೋಗುತ್ತಿದ್ದ ವೇಳೆ ಮಂಗಳೂರು ಕಡೆಯಿಂದ ಹೋಗುತ್ತಿದ್ದ ಬಸ್ ಢಿಕ್ಕಿ ಹೊಡೆದಿದ್ದು, ಪರಿಣಾಮ ಸ್ಕೂಟರ್ ಸಮೇತ ಸವಾರನನ್ನು ಸುಮಾರು 100 ಮೀಟರ್ ದೂರದವರೆಗೆ ಎಳೆದುಕೊಂಡು ಹೋಗಿದೆ. ಇದರಿಂದ ಗಂಭೀರ ಗಾಯಗೊಂಡ ಮಧುಸೂಧನ್ ಅವರು ಸ್ಥಳದಲ್ಲೇ ಮೃತಪಟ್ಟರು ಎಂದು ತಿಳಿದು ಬಂದಿದೆ.

ಈ ಬಗ್ಗೆ ಮಂಗಳೂರು ಉತ್ತರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

By suddi9

Leave a Reply

Your email address will not be published. Required fields are marked *