ಬೆಂಗಳೂರು: ಶ್ರವಣಬೆಳಗೊಳ ಮಹಾಮಸ್ತಕಾಭಿಷೇಕದ ಕಾರ್ಯಕ್ರಮದಲ್ಲಿ ಭಾಗವಹಿಸಲು ಮಂಗಳವಾರ ರಾತ್ರಿ ಇಲ್ಲಿನ ಎಚ್ಎಎಲ್ ಆಗಮಿಸಿದ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ ಅವರಿಗೆ ರಾಜ್ಯಪಾಲರಾದ ವಾಜುಬಾಯಿ ವಾಲ, ಮುಖ್ಯಮಂತ್ರಿ ಸಿದ್ದರಾಮಯ್ಯ, ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ಸೇರಿದಂತೆ ಹಿರಿಯ ಅಧಿಕಾರಿಗಳು ಸೇರಿ ಶಾಲು ಹೊದಿಸಿ, ಮೈಸೂರು ಪೇಟ ತೊಡಿಸಿ ಹೂಗುಚ್ಛ ನೀಡುವ ಮೂಲಕ ಅದ್ದೂರಿ ಸ್ವಾಗತ ಕೋರಿದರು.
ರಾಷ್ಟ್ರಪತಿಯ ರಾಮ್ನಾಥ್ ಕೋವಿಂದ್ ಅವರು ಫೆ.7ರಂದು ಬೆಳಗ್ಗೆ 10.20ಕ್ಕೆ ಶ್ರವಣಬೆಳಗೊಳಕ್ಕೆ ಆಗಮಿಸಲಿದ್ದು. ಬೆಳಗ್ಗೆ 10.45ಕ್ಕೆ ಶ್ರವಣಬೆಳಗೊಳದಲ್ಲಿ ಜರುಗುವ ಮಹಾ ಮಸ್ತಕಾಭಿಷೇಕ ಮಹೋತ್ಸವದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸುವರು.

