ಕಟೀಲು:ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಳದ ಭ್ರಾಮರೀ ವನದಲ್ಲಿ (ಕುದ್ರು)ಮಾ. 3 ರಂದು ನಡೆಯುವ ನಾಗಮಂದಲೋತ್ಸವ ಪ್ರಯುಕ್ತ ಚಪ್ಪರ ಮಹೂರ್ತವು ಫೆ. 7ರಂದು ಬುಧವಾರ ಬೆಳಗ್ಗೆ 8.30ಕ್ಕೆ ದೇವಳದ ತಂತ್ರಿಗಳಾದ ಶಿಬರೂರು ವೇದವ್ಯಾಸ ತಂತ್ರಿಗಳು ಅನುವಂಶಿಕ ಮೊಕ್ತೇಸರ ಹಾಗೂ ಪ್ರಧಾನ ಅರ್ಚಕ ವಾಸುದೇವ ಅಸ್ರಣ್ಣ ಆಡಳಿತ ಮಂಡಳಿ ಅಧ್ಯಕ್ಷ ಹಾಗೂ ಅನುವಂಶಿಕ ಮೊಕ್ತೇಸರರಾದ ಕೊಡೆತ್ತೂರುಗುತ್ತು ಸನತ್ ಕುಮಾರ್ ಶೆಟ್ಟಿ ಹಾಗೂ ಸೇವಾಕರ್ತರಾದ ಎರ್ಮಾಳು ರಾಧ ವಿಠಲ ಶೆಟ್ಟಿ ಮತ್ತು ಮಕ್ಕಳ ಉಪಸ್ಥಿತಿಯಲ್ಲಿ ನಡೆಯಲಿದೆ.
