ಸುದ್ದಿ9ಬಂಟ್ವಾಳ: ದ.ಕ.ಜಿ.ಪಂ. ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಮತ್ತು ಪ್ರಶಸ್ತಿ ವಿಜೇತ ಯುವಕ ಮಂಡಲ (ರಿ) ವಿಟ್ಲ, ಬಂಟ್ವಾಳ ತಾಲೂಕು ಇದರ ಸಂಯುಕ್ತ ಆಶ್ರಯದಲ್ಲಿ ರಾಜ್ಯಮಟ್ಟದ ಯುವಜನ ಮೇಳ 2013-14ರ ಮುನ್ನೋಟ ಬಿಡುಗಡೆಯನ್ನು ಉಸ್ತುವಾರಿ ಸಚಿವ ಬಿ.ರಮನಾಥ ರೈ ಮಾಡಿದರು. ಕಾರ್ಯಕ್ರಮದಲ್ಲಿ ಸಹಾಯಕ ಆಯುಕ್ತ ಆಶೋಕ್,ತಹಶೀಲ್ದಾರ್ ಮಲ್ಲೇಸ್ವಾಮಿ, ಜಿ.ಪಂ.ಸದಸ್ಯರಾದ ಎಂ.ಎಸ್.ಮಹಮ್ಮದ್, ಚಂದ್ರಪ್ರಕಾಶ್ ಶೆಟ್ಟಿ, ತಾ.ಪಂ.ಅಧ್ಯಕ್ಷ ಯಶವಂತ, ಸದಸ್ಯ ಮಾದವ ಮಾವೆ, ಪದ್ಮಶೇಖರ್ ಜೈನ್,ಜಿಲ್ಲಾ ಯುವ ಜನ ಒಕ್ಕೂಟದ ಅಧ್ಯಕ್ಷ ರಾಜೀವ ಸಾಲಿಯಾನ್ ಪ್ರಧಾನ ಸಂಚಾಲಕ ಸುದರ್ಶನ್ ಪಡಿಯಾರ್, ಪುತ್ತೂರು ತಾ.ಪಂ.ಸದಸ್ಯ ದಿನೇಶ್ ಮೆದು, ತಾ.ಪಂ.ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಿಪ್ರಿಯಾನ್ ಮಿರಾಂದ, ಸಹಾಯಕ ಯುವ ಸಬಲೀಕರಣ ಮತ್ತು ಕ್ರೀಡಾಧಿಕಾರಿ ನವೀನ್ ಮತ್ತು ತಾಲೂಕಿನ ವಿವಿಧ ಇಲಾಖೆಯ ಎಲ್ಲಾ ಅಧಿಕಾರಿಗಳು ಉಪಸ್ಥಿತರಿದ್ದರು.


